RNI NO. KARKAN/2006/27779|Sunday, May 10, 2026
You are here: Home » breaking news » ಮೂಡಲಗಿ:ಉಮಾಬಾಯಿ ಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ವೀರಾಗ್ರಹಿಣಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ

ಮೂಡಲಗಿ:ಉಮಾಬಾಯಿ ಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ವೀರಾಗ್ರಹಿಣಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ 

ಉಮಾಬಾಯಿ ಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ವೀರಾಗ್ರಹಿಣಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆ

 
ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ಅ 9 :

 
2019-20 ನೇ ಶೈಕ್ಷಣಿಕ ಸಾಲಿನ ಚಿಕ್ಕೋಡಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀಮತಿ ಉಮಾಬಾಯಿ ಸ್ವಾಮಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೇಖಾ ಬಸಪ್ಪ ಫಿರೋಜಿ 400 ಮೀ , 1500 ಮೀ, 3000 ಮೀ ಓಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಮಗ್ರ ವೀರಾಗ್ರಹಿಣಿಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಪ್ರಧಾನ ಗುರುಮಾತೆ ಕೆ.ಆರ್ ಫಿರೋಜಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಯು ರಾಜ್ಯ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸಿ 5 ನೇ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಯನ್ನು ಮೆಚ್ಚಿ ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಪೀಠಾಧಿಕಾರಿಗಳು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಪಾದ ಬೋಧ ಸ್ವಾಮೀಜಿ ಅಭಿನಂದಿಸಿದರು. ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕರಾದ ಉಮೇಶ ಪೂಜೇರಿ ಹಾಗೂ ವಿ.ಐ ಅನವಾಲ ಮಾರ್ಗದರ್ಶನ ನೀಡಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ವಿದ್ಯಾರ್ಥಿನಿಯ ಸಾಧನೆಯನ್ನು ಪ್ರಶಂಸಿದ್ದಾರೆ.

Related posts: