ಮೂಡಲಗಿ:ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ

ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ
ನಮ್ಮ ಬೆಳಗಾವಿ ಇ – ವಾರ್ತೆ , ಮೂಡಲಗಿ ನ 17 :
ಮನುಷ್ಯನಿಗೆ ದೈಹಿಕ ಸಾರ್ಮರ್ಥ್ಯವನ್ನು ನೀಡುವ ಅಪೂರ್ವ ಶಕ್ತಿಯು ಗ್ರಾಮೀಣ ಕ್ರೀಡೆಯಲ್ಲಿದೆ ಎಂದು ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ ಹೇಳಿದರು.
ಅವರು ಸಮೀಪದ ವಡೇರಟ್ಟಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಘಟಕ ಬೆಳಗಾವಿ, ವಡೇರಟ್ಟಿ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ದಿ ಸಂಘ ಹಾಗೂ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಗಳ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ೨೦೧೯-೨೦ನೇ ಸಾಲಿನ ಮೂಡಲಗಿ ಹೋಬಳಿ ಮಟ್ಟದ ಗ್ರಾಮೀಣ ಕ್ರೀಡೋತ್ಸವಕ್ಕೆ ಚಾಲನೆ ನೀಡಿ ಮಾತನಾಡುತ್ತ, ಪ್ರತಿಯೊಬ್ಬರು ಗ್ರಾಮೀಣ ಕ್ರೀಡೆಯನ್ನು ಪ್ರೋತ್ಸಹಿಸಬೇಕು. ಗ್ರಾಮೀಣ ಕ್ರೀಡೆಗಳು ಸಂಬAಧಗಳನ್ನು ಉತ್ತಮಪಡಿಸಿಕೊಳ್ಳಲು ಅನುಕೂಲವಾಗಿದೆ. ಇಂದಿನ ವೇಗದ ವ್ಯವಸ್ಥೆಯಲ್ಲಿ ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ ಬೀಳುತ್ತಿದ್ದು ಅಂಥ ಒತ್ತಡದಿಂದ ಮುಕ್ತರಾಗಲು ಗ್ರಾಮೀಣ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ. ಯುವ ಪೀಳಿಗೆಯೂ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಆಯಸ್ಸು ವೃದ್ದಿಯಾಗುವುದಲ್ಲದೇ ಭವಿಷ್ಯದ ಜೀವನವನ್ನು ರೂಪಿಸಿಕೊಳ್ಳಲೂ ಸಾಧ್ಯವಿದೆ. ಗ್ರಾಮೀಣ ಮಟ್ಟದ ಸಂಘ ಸಂಸ್ಥೆಗಳು ಇಂತಹ ಗ್ರಾಮೀಣ ಕ್ರೀಡೋತ್ಸವವನ್ನು ಹಮ್ಮಿಕೊಳ್ಳುವುದರಿಂದ ಗ್ರಾಮೀಣ ಕ್ರೀಡೆಗಳು ಉಳಿಯುವುದರ ಜೊತೆಗೆ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿದಂತಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಯುವ ಒಕ್ಕೂಟಗಳ ಬೆಳಗಾವಿ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಮಾತನಾಡಿ, ಯುವಶಕ್ತಿಯೂ ದೇಶದ ಆಸ್ತಿಯಾಗಿದ್ದು ಯುವಕರು ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಬೇಕು. ಇತ್ತಿಚಿನ ದಿನಗಳಲ್ಲಿ ಗ್ರಾಮೀಣ ಕ್ರೀಡೆಗಳೂ ಹೆಚ್ಚಿನ ಖ್ಯಾತಿ ಪಡೆಯುತ್ತಿವೆ. ಯುವಕರು ಗ್ರಾಮೀಣ ಕ್ರೀಡೆಯೂ ನಶಿಸಿ ಹೋಗಲು ಬಿಡಬಾರದು. ಇಂತಹ ಗ್ರಾಮೀಣ ಕ್ರೀಡೋತ್ಸವಗಳೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಹೆಚ್ಚು ನಡೆಯುವಂತಾಗಬೇಕು ಎಂದು ಹೇಳಿದರು.
ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಂಸ್ಥಾಪಕ ರಾಘವೇಂದ್ರ ದೊಡವಾಡ, ನ್ಯಾಯವಾದಿ ಸುರೇಶ ಕುದರಿ, ಕಿಶನ್ ನಂದಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ರೈತ ಸಂಘದ ಜಿಲ್ಲಾಧ್ಯಕ್ಷ ಮಹಾದೇವ ಗೊಡೇರ, ಬನಪ್ಪ ಬಿಲಕುಂದಿ, ರವಿ ಧುಪದಾಳ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದಿAದ ನಿರ್ಣಾಯಕರಾದ ಭೀರಪ್ಪ ಶಿವನಗೋಳ,ಯಲ್ಲಪ್ಪ ಭರಮಣ್ಣವರ, ಸೀದ್ರಾಮ ಡೊಳ್ಳಿ, ರಮೇಶ ನಾಯಕಮ ಇವರನ್ನು ಸತ್ಕರಿಸಲಾಯಿತು.
ಕಾರ್ಯಕ್ರಮವನ್ನು ಶಿಕ್ಷಕ ಶಿವಾನಂದ ನಾಯಕ ನಿರೂಪಿಸಿ, ವಂದಿಸಿದರು.