RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಸಂಪನ್ನ

ಗೋಕಾಕ:ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಸಂಪನ್ನ 

ಗೋಸಬಾಳ ಮಾರುತಿ ದೇವರ ಕಾರ್ತಿಕೋತ್ಸವ ಸಂಪನ್ನ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 8 :

 
ಸಮೀಪದ ಗೋಸಬಾಳ ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇದೇ ಶನಿವಾರ ಡಿ.7 ರಿಂದ ರವಿವಾರ ಡಿ.8 ರವರೆಗೆ ವಿಜೃಂಭನೆಯಿಂದ ನಡೆದು ಸಂಪನ್ನಗೊಂಡಿತು.
ಸುಣಧೋಳಿ ಜಡಿಸಿದ್ಧೇಶ್ವರ ಮಠದ ಅಭಿನವ ಶಿವಾನಂದ ಮಹಾಸ್ವಾಮಿಜಿ ದಿವ್ಯ ಸಾನಿಧ್ಯ, ಚೇತನ ಶಾಸ್ತ್ರೀಯವರ ನೇತೃತ್ವದಲ್ಲಿ ಶನಿವಾರ ಡಿ.7 ರಂದು ಬೆಳಿಗ್ಗೆ 6 ಗಂಟೆಗೆ ಸ್ಥಳೀಯ ಮಾರುತಿ ದೇವರ ದೇವಾಲಯದಲ್ಲಿರುವ ಗದ್ದುಗೆಗೆ ಮಹಾಭಿಷೇಕ ಮಹಾಪೂಜೆ, ಹೋಮ, ಎಲೆಪೂಜೆ, ಪಂಚಾಮೃತಾಭಿಷೇಕ, ಮಹಾಪ್ರಸಾದ ಕಾರ್ಯಕ್ರಮ ಜರುಗಿತು. ಮಧ್ಯಾಹ್ನ 2ಗಂಟೆಗೆ ಪುರ ಜನರಿಂದ ಪೂಜೆ, ನೈವೇದ್ಯ ಸಮರ್ಪಣೆ, ಸಾಯಂಕಾಲ 5 ಗಂಟೆಗೆ ಗ್ರಾಮದ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಸಂಜೆ 6 ಗಂಟೆಗೆ ಗೋಸಬಾಳ ಗ್ರಾಪಂ ಸಿಬ್ಬಂದಿಯವರಿಂದ ಕಾರ್ತಿಕ ದೀಪೋತ್ಸವ ಸಡಗರದಿಂದ ನಡೆದು, ರಾತ್ರಿ 10ಗಂಟೆಗೆ ರನ್ನಬೆಳಗಲಿ ಮಹಾಲಿಂಗೇಶ್ವರ ನಾಟ್ಯ ಸಂಘದವರಿಂದ ಲಂಚ ಸಾಮ್ರಾಜ್ಯ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.
ರವಿವಾರ ಡಿ.8 ರಂದು ಬೆಳಿಗ್ಗೆ 6ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಪಂಚಾಮೃತಾಭಿಷೇಕ, ಮಹಾಪೂಜೆ, ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದ ನಂತರ ಮಧ್ಯಾಹ್ನ 2ಗಂಟೆಗೆ ಸ್ಥಳೀಯ ಹಾಗೂ ಸುತ್ತಲಿನ ವಿವಿಧ ಹಳ್ಳಿಗಳ ಕಲಾ ತಂಡದವರಿಂದ ಕರಡಿ ಮಜಲು, ಹಲಿಗೆ ವಾದನ, ಡೊಳ್ಳಿನ ಮಜಲು, ಬ್ಯಾಂಡ್ ತಂಡಗಳು ಸೇರಿದಂತೆ ವಿವಿಧ ಕಲಾ ತಂಡವರಿಂದ ಭಕ್ತಿಯ ಕಲಾ ಪ್ರದರ್ಶನ ಸೇವೆ, ಸಾಯಂಕಾಲ 5.30 ಗಂಟೆಗೆ ಪಲ್ಲಕ್ಕಿ ಉತ್ಸವ, ಕಾರ್ತಿಕೋತ್ಸವ, ಕಾಯಿ ಹಾರಿಸುವದು, ಸಿಹಿಹಂಚುವದು ಸಂಭ್ರಮದಿಂದ ಜರುಗಿದ ಬಳಿಕ ಪ್ರಸಕ್ತ ವರ್ಷದ ಕಾರ್ತಿಕೋತ್ಸವ ಕಾರ್ಯಕ್ರಮ ಸಮಾರೋಪಗೊಂಡಿತು.
ಮಾರುತಿ ದೇವರ ಕಾರ್ತಿಕೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಶಿವಾನಂದ ಬುಳ್ಳಿ, ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಸ್ಥಳೀಯ ಹಾಗೂ ಸುತ್ತಲಿನ ಹತ್ತೂರಿನ ಗಣ್ಯರು, ರಾಜಕೀಯ ಮುಖಂಡರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಮಾರುತಿ ದೇವರ ಅಸಂಖ್ಯಾತ ಭಕ್ತರು ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts: