RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಸುರಕ್ಷಿತ ಪ್ರಯಾಣಕ್ಕಾಗಿ ವಾಹನ ಚಾಲಕರು ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು : ಟಿ.ಜಿ.ಹೇಮಾವತಿ

ಗೋಕಾಕ:ಸುರಕ್ಷಿತ ಪ್ರಯಾಣಕ್ಕಾಗಿ ವಾಹನ ಚಾಲಕರು ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು : ಟಿ.ಜಿ.ಹೇಮಾವತಿ 

ಸುರಕ್ಷಿತ ಪ್ರಯಾಣಕ್ಕಾಗಿ ವಾಹನ ಚಾಲಕರು ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು : ಟಿ.ಜಿ.ಹೇಮಾವತಿ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 16 :

 

 

ಸುರಕ್ಷಿತ ಪ್ರಯಾಣಕ್ಕಾಗಿ ವಾಹನ ಚಾಲಕರು ಸಾರಿಗೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಜಿ.ಹೇಮಾವತಿ ಹೇಳಿದರು.

ಗುರುವಾರದಂದು ನಗರದ ಹೊರವಲಯದಲ್ಲಿರುವ ಎಆರ್‍ಟಿಓ ಕಾರ್ಯಾಲಯದಲ್ಲಿ ತಾಲೂಕಾಡಳಿತ, ಸಾರಿಗೆ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿ, ತಮ್ಮ ಜೀವದ ಜೊತೆಗೆ ತಮ್ಮ ಕುಟುಂಬವನ್ನು ರಕ್ಷಿಸುವ ಜವಾಬ್ದಾರಿ ಸವಾರ ಮೇಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ವಾಹನ ಚಾಲನೆಯನ್ನು ಮಾಡಬೇಕು. ವಾಹನ ಚಾಲಕರು ಚಾಲನಾ ಪತ್ರ, ಹೊಗೆ ಪ್ರಮಾಣ ಪ್ರಮಾಣ ಪತ್ರ, ವಿಮೆ ಸೇರಿದಂತೆ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಸಾರಿಗೆ ನಿಯಮಗಳು ಜನತೆಯ ಸುರಕ್ಷತೆಗಾಗಿ ಇದ್ದು, ಇವುಗಳನ್ನು ಪಾಲಿಸಿ ತಮ್ಮ ಸುರಕ್ಷತೆಯೊಂದಿಗೆ ಇತರರನ್ನು ರಕ್ಷಿಸುವಂತೆ ಕರೆ ನೀಡಿದರು.
ವೇದಿಕೆ ಮೇಲೆ ಸಿಪಿಐ ವೆಂಕಟೇಶ ಮುರನಾಳ, ಪಿಎಸ್‍ಐ ಗುರುನಾಥ ಚವ್ಹಾಣ, ಮೋಟಾರು ವಾಹನ ನೀರಿಕ್ಷಕರಾದ ರವಿ ಬೀಸೆ, ಓಂಪ್ರಕಾಶ ಆಡಿನ, ಕಚೇರಿ ಅಧಿಕ್ಷಕ ಎಸ್.ಎಚ್. ಕರಿಗಾರ, ಸಿಬ್ಬಂದಿ ಮಂಜುನಾಥ ಉಪ್ಪಾರ, ರೋಟರಿ ಸಂಸ್ಥೆ ಅಧ್ಯಕ್ಷ ಸೋಮಶೇಖರ ಮಗದುಮ್ಮ ಇದ್ದರು.

Related posts: