ಗೋಕಾಕ:ಬರುವ ಶೈಕ್ಷಣಿಕ ವರ್ಷದಿಂದ 1 ರಿಂದ 5 ತರಗತಿ ವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ : ಮುರುಘರಾಜೇಂದ್ರ ಶ್ರೀ ಮಾಹಿತಿ
ಬರುವ ಶೈಕ್ಷಣಿಕ ವರ್ಷದಿಂದ 1 ರಿಂದ 5 ತರಗತಿ ವರೆಗಿನ ಮಕ್ಕಳಿಗೆ ಉಚಿತ ಶಿಕ್ಷಣ : ಮುರುಘರಾಜೇಂದ್ರ ಶ್ರೀ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮಾ 18 :
ಬರುವ ಶೈಕ್ಷಣಿಕ ವರ್ಷದಿಂದ 1 ರಿಂದ 5 ತರಗತಿ ವರೆಗೆ ಗೋಕಾಕ ನಗರಕ್ಕೆ ಹೊಂದಿಕೊಂಡ ಪತ್ರಿ ಗ್ರಾಮದಿಂದ ಐದು ಜನ ಕಡು ಬಡವ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಚನ್ನಬಸವೇಶ್ವರ ವಿದ್ಯಾಪೀಠದ ವತಿಯಿಂದ ಉಚಿತ ಶಿಕ್ಷಣ ನೀಡಲಾಗುವದು ಎಂದು ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು
ಬುಧವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು
ಶಿಕ್ಷಣ ಒಂದು ಸೇವೆ ಎಂಬ ಮಹತ್ತರ ಉದ್ದೇಶದಿಂದ ಕಳೆದ 9 ವರ್ಷಗಳ ಹಿಂದೆ ಪ್ರಾರಂಭವಾದ ಈ ಸಂಸ್ಥೆ ವಿದ್ಯಾರ್ಥಿಗಳ ಏಳ್ಗೆಗಾಗಿ ಸತತ ಶ್ರಮಿಸುತ್ತಿದೆ. ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ . ನೂರಿತ ಶಿಕ್ಷಕರ ತಂಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅವಿರತ ಕಾರ್ಯ ಮಾಡುತ್ತಿದ್ದಾರೆ. ಶೈಕ್ಷಣಿಕವಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಪ್ರವೃತವಾಗು ನಿಟ್ಟಿನಲ್ಲಿ ಬರುವ ಶೈಕ್ಷಣಿಕ ವರ್ಷದಿಂದ ಬಡತನದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಗುರುತಿಸಿ ಉಚಿತ ಶಿಕ್ಷಣ ಕೊಡಲು ಉದ್ದೇಶಿಸಲಾಗಿದ್ದು, . ತಾಲೂಕಿನ ಪ್ರತಿ ಹಳಿಯಿಂದ ಶಾಲೆಗೆ ಬರಲು ವಾಹನ ವ್ಯವಸ್ಥೆಯನ್ನು ಸಹ ಮಾಡಲಾಗುವದು ಎಂದು ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು
ಪತ್ರಿಕಾಗೋಷ್ಠಿಯಲ್ಲಿ ವಿವೇಕ ಜತ್ತಿ, ಬಸಗೌಡ ಪಾಟೀಲ , ಮಲ್ಲಿಕಾರ್ಜುನ ಈಟಿ , ಆಡಳಿತಾಧಿಕಾರಿ ಅಡಿವೇಶ ಗವಿಮಠ ಉಪಸ್ಥಿತರಿದ್ದರು