RNI NO. KARKAN/2006/27779|Monday, July 14, 2025
You are here: Home » breaking news » ಗೋಕಾಕ:ಲಾಕ್‍ಡೌನ್ ಹಿನ್ನಲೆ : ಕೃಷಿ ಪರಿಕರ ಮಾರಾಟ ಮಳಿಗೆಯನ್ನು ತೆರೆಯಲು ಅನುಮತಿ

ಗೋಕಾಕ:ಲಾಕ್‍ಡೌನ್ ಹಿನ್ನಲೆ : ಕೃಷಿ ಪರಿಕರ ಮಾರಾಟ ಮಳಿಗೆಯನ್ನು ತೆರೆಯಲು ಅನುಮತಿ 

ಲಾಕ್‍ಡೌನ್ ಹಿನ್ನಲೆ : ಕೃಷಿ ಪರಿಕರ ಮಾರಾಟ ಮಳಿಗೆಯನ್ನು ತೆರೆಯಲು ಅನುಮತಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 9 :

 

 
ಲಾಕ್‍ಡೌನ್ ಹಿನ್ನಲೆಯಲ್ಲಿ ಬಂದ ಮಾಡಲಾಗಿದ್ದ ಕೃಷಿ ಪರಿಕರ ಮಾರಾಟ ಮಳಿಗೆಯನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎಮ್.ಎಮ್.ನದಾಫ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಮಾರಾಟಗಾರರು ತಮ್ಮ ಮಳಿಗೆಗಳನ್ನು ಸಂಪೂರ್ಣವಾಗಿ ತೆರೆದು ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ರೈತರಿಗೆ ಪೂರೈಸಬೇಕೆಂದು ತಿಳಿಸಿದ್ದಾರೆ.
ಕೃಷಿ ಪರಿಕರ ಮಾರಾಟಗಾರರು ಹಾಗೂ ಮಳಿಗೆಗಳಿಗೆ ಭೇಟಿ ನೀಡುವ ರೈತರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸ್ಯಾನಿಟೈಜರ್ ಹಾಗೂ ಮಾಸ್ಕಗಳನ್ನು ಉಪಯೋಗಿಸಲು ಸೂಚನೆಯನ್ನು ನೀಡಲಾಗಿದೆ. ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಕೃಷಿ ಪರಿಕರ ಮಾರಾಟಗಾರರಿಗೆ ಈಗಾಗಲೇ ಕೃಷಿ ಇಲಾಖೆಯಿಂದ ಪಾಸುಗಳನ್ನು ವಿತರಿಸಲಾಗಿದ್ದು, ರೈತರಿಗೆ ಯಾವುದೇ ಪರಿಕರಗಳ ತೊಂದರೆಯಾಗದಂತೆ ನೆರವಾಗಲು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: