ಗೋಕಾಕ:ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ : ಸಚಿವ ರಮೇಶ ಜಾರಕಿಹೊಳಿ
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ : ಸಚಿವ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 6 :
ಪ್ರಕೃತಿ ವಿಕೋಪಗಳನ್ನು ತಡೆಗಟ್ಟಲು ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರದಂದು ನಗರದ ಶೂನ್ಯ ಸಂಪಾದನಾ ಮಠಧ ಶ್ರೀ ಚನ್ನಬಸವೇಶ್ವರ ವಿದ್ಯಾ ಪೀಠದ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ರಕ್ಷಣೆಯಿಂದ ಮಾತ್ರ ಮನುಕುಲದ ಉಳಿಯಲು ಸಾಧ್ಯ. ಸಸಿಗಳನ್ನು ನೆಟ್ಟು ಅವುಗಳ ಪಾಲನೆ ಪೋಷಣೆಯನ್ನು ಮಾಡುವ ಮೂಲಕ ಅರಣ್ಯ ಸಂಪತ್ತು ಹೆಚ್ಚಿಸೋಣ ಎಂದು ತಿಳಿಸಿದರು.
ಇಂದಿನ ಯಾಂತ್ರಿಕ ಹಾಗೂ ಆಧುನಿಕ ಯುಗದಲ್ಲಿ ನಮ್ಮ ಸ್ವಾರ್ಥಕ್ಕಾಗಿ ನಾವಿಂದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಮಾಲಿನ್ಯಗೊಳಿಸುತ್ತಿದ್ದು. ಇದರಿಂದಾಗಿ ಅತಿವೃಷ್ಟಿ-ಅನಾವೃಷ್ಟಿಗಳಾಗಿ ಮಾನವ ಜೀವನ ಅಸ್ತವ್ಯಸ್ತವಾಗುತ್ತಿದೆ. ಆರೋಗ್ಯವಂತ ಹಾಗೂ ನೆಮ್ಮದಿಯ ಜೀವನಕ್ಕಾಗಿ ಪರಿಸರ ರಕ್ಷಣೆ ಒಂದೇ ಪರಿಹಾರವಾಗಿದ್ದು ಎಲ್ಲರೂ ಮುಂದಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶೂನ್ಯ ಸಂಪದನಾ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಎಪಿಎಮ್‍ಸಿ ಅಧ್ಯಕ್ಷ ಅಡಿವೆಪ್ಪ ಕಿತ್ತೂರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಮಲ್ಲಿಕಾರ್ಜುನ ಈಟಿ, ಅಶೋಕ ಪಾಟೀಲ, ಶಂಕರ ಧರೆನ್ನವರ,ಮಾಯಪ್ಪ ತಹಶೀಲದಾರ, ಉಪ-ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ಎಸ್.ಜಿ., ವಲಯ ಅರಣ್ಯಾಧಿಕಾರಿ ಕೆ.ಎನ್.ವಣ್ಣೂರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಉಪ-ವಲಯ ಅರಣ್ಯಾಧಿಕಾರಿ ಎಚ್.ಎಸ್.ಇಂಗಳಗಿ ಸೇರಿದಂತೆ ಅನೇಕರು ಇದ್ದರು.
