RNI NO. KARKAN/2006/27779|Wednesday, June 24, 2026
You are here: Home » breaking news » ಗೋಕಾಕ:ಶಾಸಕ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದ ಘಟನೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಗೋಕಾಕ:ಶಾಸಕ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದ ಘಟನೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು 

ಶಾಸಕ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದ ಘಟನೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಗೋಕಾಕ ಸೆ 1 : ಮಾಜಿ ಸಚಿವ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ದುಷ್ಕರ್ಮಿಗಳು ಕಪ್ಪು ಮಸಿ ಬಳಿದ ಘಟನೆಗೆ ಸಂಬಂಧವಾಗಿ ನಗರ ಪೋಲೀಸ ಠಾಣೆಯಲ್ಲಿ ದೂರುವೊಂದು ದಾಖಲಾಗಿರುತ್ತದೆ.

ಅಟೋರಿಕ್ಷಾ ಸಂಘದ ಅಧ್ಯಕ್ಷ ಮೈನುದ್ದೀನ ಮಹಮ್ಮದಸಾಬ ಪಾತ್ರಿ ಎಂಬವರು ಪೋಲೀಸರಿಗೆ ದೂರು ನೀಡಿ ಕಳೆದ ದಿ. 30ರಂದು ರಾತ್ರಿ ಯಾರೋ ಕಿಡಗೇಡಿಗಳು ಶಾಸಕ ಸತೀಶ ಜಾರಕಿಹೊಳಿ ಅವರ ಭಾವಚಿತ್ರಕ್ಕೆ ಮಸಿ ಬಳಿದಿದ್ದು ಈ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಾನೂನು ಪ್ರಕಾರ ಕ್ರಮ ಕೈಕೊಳ್ಳಬೇಕೆಂದು ಕೇಳಿಕೊಂಡಿದ್ದಾರೆ.

ನಗರ ಠಾಣೆ ಪೋಲೀಸರು 295 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
ಈ ಮಧ್ಯೆ ನಗರದ ವಿವಿಧ ಸಂಘಟನೆಗಳು ಈ ಕೃತ್ಯವನ್ನು ಖಂಡಿಸಿದ್ದು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.

Related posts: