ಗೋಕಾಕ:ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಸೆ 14 :
ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸಿ, 5 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಹಾಗೂ ಕಾರ್ಖಾನೆಯ ಮಾರ್ಗದರ್ಶಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ವಾರದೊಳಗೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಲಿದ್ದು, ಈ ಬಾರಿ ವರುಣನ ಆಶೀರ್ವಾದದಿಂದ ಬೆಳೆಗಳು ಉತ್ತಮವಾಗಿವೆ. ಕಬ್ಬು ಸಹ ಅಧಿಕವಾಗಿ ಬೆಳೆದಿದ್ದು, ಕಾರ್ಖಾನೆಯ ಪ್ರಗತಿಯಲ್ಲಿ ರೈತರ ಪಾತ್ರ ಬಹುಮುಖ್ಯವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ತಮ್ಮ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸಿ ಕಾರ್ಖಾನೆಯ ಶ್ರೇಯೋಭಿವೃದ್ಧಿಗೆ ಕೈ ಜೋಡಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.