RNI NO. KARKAN/2006/27779|Tuesday, October 14, 2025
You are here: Home » breaking news » ಗೋಕಾಕ:ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಚನಾತ್ಮಕ ಕಾರ್ಯವನ್ನು ಮಾಡುತ್ತಿದೆ : ಪ್ರಕಾಶ ಹೊಳೆಪ್ಪಗೋಳ

ಗೋಕಾಕ:ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಚನಾತ್ಮಕ ಕಾರ್ಯವನ್ನು ಮಾಡುತ್ತಿದೆ : ಪ್ರಕಾಶ ಹೊಳೆಪ್ಪಗೋಳ 

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಚನಾತ್ಮಕ ಕಾರ್ಯವನ್ನು ಮಾಡುತ್ತಿದೆ : ಪ್ರಕಾಶ ಹೊಳೆಪ್ಪಗೋಳ

 

 

ನಮ್ಮ ಬೆಳಗಾವಿ ಇ – ವಾರ್ತೆ ,ಗೋಕಾಕ ಸೆ 15 :

 

ಪ್ರಕೃತಿ ವಿಕೋಪಗಳಂತಹ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಸ್ವಯಂ ಸೇವಕರ ತಂಡವನ್ನು ರಚಿಸಿ ಅವರಿಗೆ ತರಬೇತಿ ನೀಡುವುದರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಚನಾತ್ಮಕ ಕಾರ್ಯವನ್ನು ಮಾಡುತ್ತಿದೆ ಎಂದು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು.
ಮಂಗಳವಾರದಂದು ನಗರದ ಜ್ಞಾನ ಮಂದಿರ ಅಧ್ಯಾತ್ಮಿಕ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬಿ.ಸಿ.ಟ್ರಸ್ಟ್ ಗೋಕಾಕ, ಜನ ಜಾಗೃತಿ ವೇದಿಕೆ ಬೆಳ್ತಂಗಡಿ ಇವರ ಸಂಯುಕ್ತಾಶ್ರಯದಲ್ಲಿ ಡಾ.ವಿರೇಂದ್ರ ಹೆಗಡೆ ಮತ್ತು ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡ ವಿಪತ್ತು ನಿರ್ವಹಣಾ ಸ್ವಯಂ ಸೇವಕರಿಗೆ ವಿಶೇಷ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಪ್ರಕೃತಿ ವಿಕೋಪಗಳನ್ನು ಎದುರಿಸಲು ಹೆಚ್ಚಿನ ಮಾನವ ಸಂಪನ್ಮೂಲದ ಅವಶ್ಯಕತೆಯಿದೆ. ಸ್ವಯಂ ಸೇವಕರ ತಂಡದ ರಚನೆ ಹಾಗೂ ಅವರಿಗೆ ತರಬೇತಿಯನ್ನು ನೀಡುತ್ತಿರುವುದು ಒಳ್ಳೆಯ ಕಾರ್ಯವಾಗಿದೆ. ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ತಂಡಗಳ ಕಾರ್ಯಾಚಾರಣೆಯಿಂದ ಹೆಚ್ಚಿನ ಹಾನಿಯನ್ನು ತಡೆಯಬಹುದು. ಸರ್ಕಾರ ಸಾಕಷ್ಟು ಸಿದ್ದತೆಗಳನ್ನು ಮಾಡಿಕೊಂಡಿದ್ದರೂ, ಸಾರ್ವಜನಿಕರ ಹಾಗೂ ತರಬೇತಿ ಪಡೆದ ತಂಡಗಳ ಸಹಕಾರ ಕೂಡಾ ಅಷ್ಟೆ ಮುಖ್ಯವಾಗಿದೆ. ಸ್ವಯಂ ಸೇವಕರು ಆಸಕ್ತಿಯಿಂದ ತರಬೇತಿ ಪಡೆದು ಸಾಮಾಜಿಕ ಕಳಕಳಿಯ ಕಾರ್ಯದಲ್ಲಿ ಪಾಲ್ಗೊಳ್ಳಿ ಇದಕ್ಕೆ ಬೇಕಾಗುವ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಂಸ್ಥೆಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ವಿಭಾಗದ ಕೇಂದ್ರ ಯೋಜನಾಧಿಕಾರಿ ಜಯಂತ ಪಟಗಾರ ಮಾತನಾಡಿ, ರಾಜ್ಯದ 55 ತಾಲೂಕುಗಳಲ್ಲಿ 100ಜನರನ್ನೊಳಗೊಂಡ ತಂಡಗಳನ್ನು ರಚಿಸಿ ಅವರಿಗೆ ಸೂಕ್ತ ತರಬೇತಿಯನ್ನು ನೀಡಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಅವರನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಸಂಸ್ಥೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಮಾತನಾಡಿ, ಗ್ರಾಮೀಣ ಜನರ ಸ್ವಾವಲಂಬಿ ಬದುಕಿಗೆ ಸಂಸ್ಥೆ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಶ್ರಮಿಸುತ್ತಿದೆ. ಶಿಕ್ಷಣ ಆರೋಗ್ಯ, ಕೃಷಿ, ಅಂಗವಿಕಲರಿಗೆ ಸಲಕರಣೆ, ವಿದ್ಯಾರ್ಥಿಗಳಿಗೆ ಟ್ಯಾಬ್ ಹಾಗೂ ಲ್ಯಾಪ್‍ಟ್ಯಾಪ್‍ಗಳನ್ನು ನೀಡಿ ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಕನಸ್ಸನ್ನು ನನಸಾಗಿಸಲು ನಮ್ಮ ಸಂಸ್ಥೆ ಶ್ರಮಿಸುತ್ತಿದೆ ಎಂದು ತಿಳಿಸಿದರು.
ವೇದಿಕೆ ಮೇಲೆ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಉದಯಕುಮಾರ, ಯೋಜನಾಧಿಕಾರಿ ನಾಗೇಶ, ಸಂಸ್ಥೆಯ ತಾಲೂಕಾ ಯೋಜನಾಧಿಕಾರಿ ಮಮತಾ ಎನ್. ಇದ್ದರು.
ಕಾರ್ಯಕ್ರಮದ ನಂತರ ತರಬೇತುದಾರ ಎನ್‍ಡಿಆರ್‍ಎಫ್ ಅಧಿಕಾರಿ ಆರ್.ಅಬೇನ್ ಅವರು ಪ್ರಾತ್ಯಕ್ಷತೆಯ ಮೂಲಕ ತರಬೇತಿ ನೀಡಿದರು.

Related posts: