RNI NO. KARKAN/2006/27779|Thursday, January 15, 2026
You are here: Home » breaking news » ಗೋಕಾಕ:ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಟಗೇರಿ ಪ್ರತಿಭಟನೆ

ಗೋಕಾಕ:ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಟಗೇರಿ ಪ್ರತಿಭಟನೆ 

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬೆಟಗೇರಿ ಪ್ರತಿಭಟನೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಸೆ 28 :

 

ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ತಿದ್ದುಪಡಿ ವಿಧೇಯಕ ಸೇರಿದಂತೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಸೋಮವಾರದಂದು ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಹಯೋಗದಲ್ಲಿ ಗ್ರಾಮ ಘಟಕಗಳ ಸದಸ್ಯರು ಕೆಲ ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು.
ಹಸಿರು ಸೇನೆಯ ಬೆಳಗಾವಿ ಜಿಲ್ಲಾ ಸಂಚಾಲಕ ಮುತ್ತೆಪ್ಪ ಕುರುಬರ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧ ನೀತಿಯ ಧೋರಣೆಯನ್ನು ತೀವ್ರವಾಗಿ ಖಂಡಿಸಿದರು. ಎತ್ತಿನ ಬಂಡಿ ಹೂಡಿ ಸರ್ಕಾರದ ವಿರುದ್ಧ ಘೂಷನೆ ಕೂಗುತ್ತಾ ಪ್ರತಿಭಟನೆ ಮಾಡಿದರು.
ಹಸಿರು ಸೇನೆಯ ಗೋಕಾಕ ತಾಲೂಕಾಧ್ಯಕ್ಷ ಪ್ರಕಾಶ ಹಾಲಣ್ಣವರ, ಮಹಾಂತೇಶ ಪಡಶೆಟ್ಟಿ, ರಾಮಪ್ಪ ಯಾದವಾಡ, ಭೀಮಶೆಪ್ಪ ಹೊಂಗಲ, ಸದಾಶಿವ ಬೆನ್ನಾಳಿ, ಲಕ್ಕಪ್ಪ ಜಟ್ಟೆಪ್ಪಗೋಳ, ಹನುಮಂತ ಕರಿಗಾರ, ರಾಮಣ್ಣ ಬಳಿಗಾರ, ವಿಠಲ ಚಂದರಗಿ ಸೇರಿದಂತೆ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕಗಳ ಪದಾಧಿಕಾರಿಗಳು, ಸದಸ್ಯರು, ಹಲವಾರು ಜನ ರೈತ ಮುಖಂಡರು, ರೈತರು ಇದ್ದರು.

Related posts: