ಗೋಕಾಕ:ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಶಾಸಕ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಪ್ರತಿಭಟನೆ
ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಶಾಸಕ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 4 :
ಉತ್ತರ ಪ್ರದೇಶದ ಹತ್ರಾಸನಲ್ಲಿ ನಡೆದ ದಲಿತ ಬಾಲಕಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ ರವಿವಾರದಂದು ಸಂಜೆ ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಮೊಂಬತ್ತಿ ಹಿಡಿದು ಪ್ರಧಾನಿ ಮೋದಿ ಹಾಗೂ ಉ.ಪ. ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ, ರಾಹುಲ ಜಾರಕಿಹೊಳಿ, ಪ್ರಕಾಶ ಡಾಂಗೆ, ಜಿ.ಪಂ ಸದಸ್ಯ ಮಹಾಂತೇಶ ಮಗದುಮ್ಮ, ಸಂಜಯ ಮಾಡಲಗಿ, ವಿವೇಕ ಜತ್ತಿ, ರಿಯಾಜ ಚೌಗಲಾ, ಆಯೇಶಾ ಸನದಿ, ಕಲ್ಪನಾ ಜೋಶಿ, ಮುನ್ನಾ ಖತೀಬ ಸೇರಿದಂತೆ ಅನೇಕರು ಇದ್ದರು.