RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಲು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ : ಸಚಿವ ರಮೇಶ

ಗೋಕಾಕ:ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಲು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ : ಸಚಿವ ರಮೇಶ 

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಲು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ : ಸಚಿವ ರಮೇಶ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 1 :

 
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕಲ್ಪಿಸಲು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು.

ರವಿವಾರದಂದು ತಾಲೂಕಿನ ಖನಗಾಂವ ಗ್ರಾಮದಲ್ಲಿ ಕೆಪಿಎಸ್ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಾ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗದಿಂದ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳವಂತೆ ಕರೆ ನೀಡಿದರು.

ಅವರು ಈ ಸಂದರ್ಭದಲ್ಲಿ 95 ಲಕ್ಷ ರೂ ಅನುದಾನದಲ್ಲಿ 6 ಕೊಠಡಿಗಳನ್ನು ಉದ್ಘಾಟಿಸಿ 2 ಕೋಟಿ ಅನುದಾನದಲ್ಲಿ ನಿರ್ಮಿಸುತ್ತಿರುವ 13 ಶಾಲಾ ಕೊಠಡಿಗಳಿಗೆ ಗುದ್ದಲಿ ಪೂಜೆ ನೇರವೆರಿಸಿದರು

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರಾದ ಟಿ.ಆರ್.ಕಾಗಲ್, ಮಡೆಪ್ಪಾ ತೋಳಿನವರ, ತಾ‌ಪಂ ಸದಸ್ಯ ಶಿವಕ್ಕ ಪೂಜೇರಿ, ಗ್ರಾ.ಪಂ ಅಧ್ಯಕ್ಷ ರಾಜು ತಡಸಲೂರ, ಗಣ್ಯರಾದ ಸಿದ್ದಗೌಡಾ ಪಾಟೀಲ್ , ಬಸಪ್ಪ ಅಮ್ಮಿನಿ , ಬಿ.ಎಂ.ವಣ್ಣೂರ , ಬಿಇಒ ಜಿ.ಬಿ.ಬಳಗಾರ, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಎ.ಬಿ ಮಲಬನ್ನವರ ಸೇರಿದಂತೆ ಅನೇಕರು ಇದ್ದರು.

Related posts: