ಗೋಕಾಕ:ನಾಳೆ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸರಕಾರಿ ನೌಕರರಿಗೆ ಉಚಿತ ಲಸಿಕೆ : ಬಿ.ಆರ್.ಮುರಗೋಡ ಮಾಹಿತಿ
ನಾಳೆ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸರಕಾರಿ ನೌಕರರಿಗೆ ಉಚಿತ ಲಸಿಕೆ : ಬಿ.ಆರ್.ಮುರಗೋಡ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 27:
ದಿನಾಂಕ 28 ರಂದು ಮುಂಜಾನೆ 10 ಘಂಟೆಯಿಂದ ಸಾಯಂಕಾಲ ದವರೆಗೆ ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕಿನ ಎಲ್ಲ ಸರಕಾರಿ ನೌಕರರಿಗೆ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಬಿ.ಆರ್. ಮುರಗೋಡ ತಿಳಿಸಿದ್ದಾರೆ .
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊರೋನಾ ಮಹಾಮಾರಿ ತಡೆಯಲು ಪ್ರತಿಯೊಬ್ಬರು ಲಸಿಕೆ ಹಾಕಿಕೊಳ್ಳುವದು ಅವಶ್ಯಕವಾಗಿದ್ದು, ಆ ನಿಟ್ಟಿನಲ್ಲಿ ತಾಲೂಕಾಡಳಿತ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ತಾಲೂಕಿನ ಎಲ್ಲ ಸರಕಾರಿ ನೌಕರರಿಗೆ ಲಸಿಕೆ ನೀಡುವ ಕಾರ್ಯಕ್ರಮವು ಸ್ಥಳೀಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಲ್ಲಿಯ ವರೆಗೆ ಲಸಿಕೆ ಹಾಕಿಕೊಳ್ಳದ ಸರಕಾರಿ ನೌಕರರು ತಮ್ಮ ಆಧಾರ ಕಾರ್ಡ ಪ್ರತಿಯೊಂದಿಗೆ ಮಹಾವಿದ್ಯಾಲಯಕ್ಕೆ ಬಂದು ಲಸಿಕೆ ಹಾಕಿಸಿಕೊಳ್ಳಬೇಕೆಂದು ಬಿ.ಆರ್.ಮುರಗೋಡ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.