ಗೋಕಾಕ:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಹತ್ಯೆ : ಗೋಕಾಕದಲ್ಲಿ ಘಟನೆ
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕ ಹತ್ಯೆ : ಗೋಕಾಕದಲ್ಲಿ ಘಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 18 :
ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ಗೋಕಾಕ ನಗರದ ಹೊರವಲಯದ ಮಹಾಂತೇಶ ನಗರದಲ್ಲಿ ಘಟಿಸಿದೆ.
ಮಂಜು ಶಂಕರ ಮುರ್ಕಿಬಾಂವಿ (22) ಕೊಲೆಯಾದ ದುರ್ದೈವಿಯಾಗಿದ್ದು, ಶುಕ್ರವಾರ ತಡರಾತ್ರಿ ಯುವನನ್ನು ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿದ್ದು, ಕೊಲೆಗೈದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದ್ದು, ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಭೇಟಿ ನೀಡಿರುವ ಗೋಕಾಕ ಗ್ರಾಮೀಣ ಠಾಣೆಯ ಪೊಲೀಸರು ತನಿಖೆಯನ್ನು ನಡೆಸಿದ್ದು, ಗೋಕಾಕ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.