ಗೋಕಾಕ:ಪ್ರಧಾನ ಮಂತ್ರಿ ನರೇಂದ್ರ ಮೋದಿ 71ನೇಯ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮ
ಪ್ರಧಾನ ಮಂತ್ರಿ ನರೇಂದ್ರ ಮೋದಿ 71ನೇಯ ಜನ್ಮದಿನದ ಅಂಗವಾಗಿ ವಿವಿಧ ಕಾರ್ಯಕ್ರಮ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 16 :
ವಿಶ್ವದ ಅಗ್ರಗಣ್ಯ ನಾಯಕ, ದೇಶದ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರ 71ನೇಯ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ದಿ.17 ರಂದು ಮುಂಜಾನೆ 10 ಗಂಟೆಗೆ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಮೋದಿಯವರ ಜನ್ಮದಿನದ ಆಚರಣೆ ನಡೆಸಿ, ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್‍ನ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭಾರತೀಯ ಜನತಾ ಪಾರ್ಟಿಯ ನಗರ ಹಾಗೂ ಗ್ರಾಮೀಣ ಮಂಡಲಗಳ ಎಲ್ಲ ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.