RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೇಸ್ ಸೋಲಿಸಲು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ

ಗೋಕಾಕ:ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೇಸ್ ಸೋಲಿಸಲು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ 

ಒಂದು ಮತ ಬಿಜೆಪಿ ಗೆಲ್ಲಿಸಲು, ಇನ್ನೊಂದು ಮತ ಕಾಂಗ್ರೇಸ್ ಸೋಲಿಸಲು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 5 :

 
ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸಂಘಟಿತರಾಗಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರವಿವಾರ ಸಂಜೆ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರವು ದ್ವಿ ಸದಸ್ಯತ್ವವನ್ನು ಹೊಂದಿದ್ದು, ಇದರಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ. ಇನ್ನೊಂದು ಕಾಂಗ್ರೇಸ್‍ನ್ನು ಸೋಲಿಸಬೇಕಾಗಿದೆ. ಒಟ್ಟು ಎರಡು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿ ಮತದಾರರ ಮನೆಗೆ ಹೋಗಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ಪಣ ತೊಡುವಂತೆ ಕಾರ್ಯಕರ್ತರಲ್ಲಿ ಕೋರಿದರು.
ಈಗಾಗಲೇ ಎರಡು ಬಾರಿ ಆಯ್ಕೆಯಾಗಿರುವ ಮಹಾಂತೇಶ ಕವಟಗಿಮಠ ಅವರು ಮತ್ತೇ ಮೂರನೇ ಬಾರಿಗೆ ಸ್ಪರ್ಧೆ ಮಾಡಿದ್ದಾರೆ. ಪಕ್ಷದ ಸಾಧನೆಗಳನ್ನು ಮತದಾರರಿಗೆ ವಿವರಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಲು ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಇನ್ನೊಂದು ಮತ ಕಾಂಗ್ರೇಸ್ ಪಕ್ಷದ ವಿರುದ್ಧವಾಗಿ ಚಲಾಯಿಸುವಂತೆ ಅವರು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಪದಾಧಿಕಾರಿಗಳು, ಗ್ರಾಪಂ, ಪುರಸಭೆ ಸದಸ್ಯರುಗಳು ಉಪಸ್ಥಿತರಿದ್ದರು.

Related posts: