RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:29ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಗೋಕಾಕ:29ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ 

29ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಶಾಲೆಯ ವಿದ್ಯಾರ್ಥಿಗಳು ಆಯ್ಕೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 27 :

 

ಇಲ್ಲಿನ ಲಕ್ಷ್ಮೀ ಎಜುಕೇಶನ್ ಟ್ರಸ್ಟನ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು 29ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ, ದೆಹಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ ಹಾಗೂ ಸ್ಟೆಪ್ಸ ಗೋಕಾಕ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ 29ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಕುಮಾರಿ ಪವಿತ್ರಾ ಲಮಾಣಿ, ಕುಮಾರಿ ಜ್ಯೋತಿ ನೇಸರಗಿ ಮತ್ತು ಹಿರಿಯ ವಿಭಾಗದಲ್ಲಿ ಕುಮಾರ್ ಸಂಜಯ ಕೊಪ್ಪದ , ಕುಮಾರ್ ಅಂಕಿತ ಗುರಕನವರ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಈ ಸಾಧನೆಗೆ ಸಂಸ್ಥೆಯ ಚೇರಮನ ಭೀಮಶಿ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಮತ್ತು ಶಾಲೆಯ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts: