RNI NO. KARKAN/2006/27779|Thursday, January 15, 2026
You are here: Home » breaking news » ಖಾನಾಪುರ:ತೋಟದ ಮನೆಗೆ ಆಕಸ್ಮಿಕ ಬೆಂಕಿ : 2 ಎಮ್ಮೆ ,1 ಹಸುವಿಗೆ ಗಂಭೀರ ಗಾಯ : ನಂದಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ

ಖಾನಾಪುರ:ತೋಟದ ಮನೆಗೆ ಆಕಸ್ಮಿಕ ಬೆಂಕಿ : 2 ಎಮ್ಮೆ ,1 ಹಸುವಿಗೆ ಗಂಭೀರ ಗಾಯ : ನಂದಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ 

ತೋಟದ ಮನೆಗೆ ಆಕಸ್ಮಿಕ ಬೆಂಕಿ : 2 ಎಮ್ಮೆ ,1 ಹಸುವಿಗೆ ಗಂಭೀರ ಗಾಯ : ನಂದಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ

 
ನಮ್ಮ ಬೆಳಗಾವಿ ಇ – ವಾರ್ತೆ, ಖಾನಾಪುರ ಜ 20 :

 
ಬೆಂಕಿ ಬಿದ್ದ ತೋಟದ ಮನೆಗೆ ನುಗ್ಗಿ ಜಾನುವಾರು ರಕ್ಷಣೆಗೆ ರೈತ ಹರಸಾಹಸ ಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ‌ ಅವರೊಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ತೋಟದ ಮನೆ ಹತ್ತಿಕೊಂಡು ಉರಿದಿದ್ದು ಪ್ರಾಣದ ಹಂಗು ತೊರೆದು ಜಾನುವಾರು ರಕ್ಷಣೆಗೆ ರೈತ ಹರಸಾಹಸ ಪಟ್ಟಿದ್ದಾರೆ.
ಅವರೊಳ್ಳಿ ಗ್ರಾಮದಲ್ಲಿ ತಡರಾತ್ರಿ ನವರತ್ನ ಜೋಳದ ಎಂಬುವವರಿಗೆ ಸೇರಿದ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಜೀವವನ್ನೂ ಲೆಕ್ಕಿಸದೇ ಬೆಂಕಿಯಲ್ಲಿ ನುಗ್ಗಿದ ರೈತ ಜಾನುವಾರು ರಕ್ಷಣೆ ಮಾಡಿದ್ದಾರೆ. 1 ಕರು ಬೆಂಕಿಗಾಹುತಿಯಾಗಿದ್ದು 2 ಎಮ್ಮೆ ಹಾಗೂ 1 ಹಸುವಿಗೆ ಗಂಭೀರ ಗಾಯಗಳಾಗಿವೆ. ತೋಟದ ಮನೆಯಲ್ಲಿದ್ದ ಕೃಷಿ ಸಾಮಗ್ರಿಯಲ್ಲವೂ ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿದೆ. ಅಂದಾಜು 80 ಸಾವಿರಕ್ಕೂ ಹೆಚ್ಚು ಹಾನಿ ಸಂಭವಿಸಿದೆ. ನಂದಗಡ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts: