RNI NO. KARKAN/2006/27779|Wednesday, June 24, 2026
You are here: Home » breaking news » ಗೋಕಾಕ:ದಿ. 13 ರಂದು ನಗರದ ಶ್ರೀ ಶಿವಯೋಗಿ ತತ್ವ ವಿಚಾರ ವೇದಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭ

ಗೋಕಾಕ:ದಿ. 13 ರಂದು ನಗರದ ಶ್ರೀ ಶಿವಯೋಗಿ ತತ್ವ ವಿಚಾರ ವೇದಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭ 

ದಿ. 13 ರಂದು ನಗರದ ಶ್ರೀ ಶಿವಯೋಗಿ ತತ್ವ ವಿಚಾರ ವೇದಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭ

 
ಗೋಕಾಕ ಮಾ 11 : ನಗರದ ಶ್ರೀ ಶಿವಯೋಗಿ ತತ್ವ ವಿಚಾರ ವೇದಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 13 ರಂದು 10 ಘಂಟೆಗೆ ಇಲ್ಲಿನ ಶೂನ್ಯ ಸಂಪಾದನ ಮಠದಲ್ಲಿ ಜರುಗಲಿದೆ.

ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶೂನ್ಯ ಸಂಪಾದನಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಪ್ರವಚನಕಾರರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾರುಗೇರಯ ಐ.ಆರ್.ಮಠಪತಿ ಗುರುಗಳು ಆಗಮಿಸಲಿದ್ದಾರೆ. ಶಾ‌ಸಕ ರಮೇಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಜ್ಯೋತಿ ಬೆಳಗಿಸುವರು. ಅಧ್ಯಕ್ಷತೆಯನ್ನು ಬಿಇಒ ಜಿ.ಬಿ.ಬಳಗಾರ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಡಾ.ಅಶೋಕ ಮುರಗೋಡ, ಬಸವರಾಜ ಹಿರೇಮಠ, ಜಿ.ಆರ್.ಮಾಳಗಿ ಆಗಮಿಸಲಿದ್ದಾರೆ.
ಅಭಿಮಾನಿಗಳು , ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವೇದಿಕೆಯ ಅಧ್ಯಕ್ಷ ಬಸವರಾಜ ಮುರಗೋಡ ಪ್ರಕಟಣೆಯಲ್ಲಿ ಕೋರಿದ್ದಾರೆ.

Related posts: