RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ

ಗೋಕಾಕ:ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ 

ದಿ 17 ರಂದು ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಕಾರ್ಯಕಾರಿಣಿ ಸಭೆ : ಮಂಜುನಾಥ ಪ್ರಭುನಟ್ಟಿ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 16 :

 

ಬಿಜೆಪಿ ನಗರ ಹಾಗೂ ಗ್ರಾಮೀಣ ಯುವ ಮೋರ್ಚಾ ವತಿಯಿಂದ ವಿಕಾಸ್ ತೀರ್ಥ ಬೈಕ್ ರ್ಯಾಲಿ ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆ ಶುಕ್ರವಾರ ದಿ.17 ರಂದು ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತ್ರತ್ವದ ಕೇಂದ್ರ ಸರಕಾರ 8.ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಬೆಳಿಗ್ಗೆ 09.ಗಂಟೆಗೆ ನಗರದ ಕೊಳವಿ ಹನುಮಂತ ದೇವಸ್ಥಾನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಲಯದ ವರೆಗೆ ವಿಕಾಸ್ ತೀರ್ಥ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.
ಮಧ್ಯಾಹ್ನ 11.ಗಂಟೆಗೆ ನಗರದ ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಸಭೆಗೆ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪಕುಮಾರ ಕೆ ಸಿ, ಬೆಳಗಾವಿ ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜಯ ಪಾಟೀಲ, ಜಿಲ್ಲೆಯ ಸಂಸದರು, ಶಾಸಕರು ಪಕ್ಷದ ಪದಾಧಿಕಾರಿಗಳು ಭಾಗವಹಿಸುವರು. ಬೈಕ್ ರ್ಯಾಲಿಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಗೋಕಾಕ ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: