ಗೋಕಾಕ:ಪರಸ್ಪರ ಹೊಂದಾಣಿಕೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ : ಅಧಿಕಾರಿಗಳಿಗೆ ಶಾಸಕ ರಮೇಶ್ ಸೂಚನೆ
ಪರಸ್ಪರ ಹೊಂದಾಣಿಕೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡಿ : ಅಧಿಕಾರಿಗಳಿಗೆ ಶಾಸಕ ರಮೇಶ್ ಸೂಚನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 12 :
ಪರಸ್ಪರ ಹೊಂದಾಣಿಕೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಮಹತ್ವ ನೀಡುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಮಂಗಳವಾರದಂದು ತಾಲೂಕಿನ ಮರಡಿಮಠ ಗ್ರಾಮದಲ್ಲಿರುವ ಕೊಣ್ಣೂರ ಪುರಸಭೆ ಆವರಣದಲ್ಲಿ ಕೊಣ್ಣೂರ ಪುರಸಭೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸತತವಾಗಿ ಮಳೆ ಬಿಳುತ್ತಿರುವ ಹಿನ್ನೆಲೆಯಲ್ಲಿ ಮಳೆಯಿಂದ ಹಾಗೂ ಪ್ರವಾಹದಿಂದ ಸಂಭವಿಸುವ ಅವಗಡಗಳಿಗೆ ಎಲ್ಲಾ ರೀತಿಯ ಪೂರ್ವ ಸಿದ್ದತೆ ಮಾಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು ಹಾಗೂ ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯನಿರ್ವಹಿಸಬೇಕು. ಪೌರ ಕಾರ್ಮಿಕರು ತಾವು ತಮ್ಮ ಕರ್ತವ್ಯದಲ್ಲಿ ನಿರತರಾಗಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಲು ನಾವು ಬದ್ಧರಾಗಿದ್ದೇವೆ. ಸದಸ್ಯರುಗಳು ತಮ್ಮ ವಾರ್ಡಗಳಲ್ಲಿಯ ಜನರ ಸಮಸ್ಯೆಗೆ ಸ್ವಂದಿಸಿ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಖ್ಯಾಧಿಕಾರಿ ಶಿವಾನಂದ ಹಿರೇಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ಮಂಗಳಾ ತೇಲಿ, ಉಪಾಧ್ಯಕ್ಷ ಅಶೋಕ್ ಕುಮಾರ್ ನಾಯಿಕ , ಹಿರಿಯ ಸದಸ್ಯ ಪ್ರಕಾಶ ಕರನಿಂಗ್, ವಿನೋದ ಕರನಿಂಗ್ ಸೇರಿದಂತೆ ಸರ್ವ ಸದಸ್ಯರು ಉಪಸ್ಥಿತರಿದ್ದರು.
