RNI NO. KARKAN/2006/27779|Wednesday, October 15, 2025
You are here: Home » breaking news » ಮೂಡಲಗಿ:ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ 

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ :
ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಣಾಧಿಕಾರಿಗಳ ಕಾರ್ಯಾಲಯ ಆರಂಭವಾಗಲಿದೆ ಎಂದು ಹೇಳಿದರು.
ಮೂಡಲಗಿಯಲ್ಲಿ ಉಪನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ತಹಶೀಲ್ದಾರ ಕಛೇರಿ ಹತ್ತಿರ 3 ಕೊಠಡಿಗಳನ್ನು ನೀಡಲಾಗಿದೆ. ಜೊತೆಗೆ ಫರ್ನಿಚರ್ ಕಾಮಗಾರಿಯು ಈಗಾಗಲೇ ಮುಗಿದಿದೆ. ಮೂಡಲಗಿ ಹೊಸ ತಾಲೂಕು ರಚನೆಯಾದ ನಂತರ ಸಾರ್ವಜನಿಕರ ಬೇಡಿಕೆ ದಿನೇ ದಿನೇ ಹೆಚ್ಚುತ್ತಿತ್ತು. ಗೋಕಾಕದಲ್ಲಿ ರೈತರ ಸಂಖ್ಯೆ ದಿನೇ ದಿನೇ ಅಧಿಕವಾಗುತ್ತಿರುವುದರಿಂದ ಮೂಡಲಗಿ ತಾಲೂಕಿನ ಸಾರ್ವಜನಿಕರ ಹಿತದೃಷ್ಟಿಯಿಂದ ಮೂಡಲಗಿಯಲ್ಲಿಯೇ ಉಪನೋಂದಣಾಧಿಕಾರಿಗಳ ಕಛೇರಿ ಆರಂಭವಾಗಲಿದೆ. ಇಡೀ ತಾಲೂಕಿನ ರೈತರ ಸೇವೆಗೆ ಕಛೇರಿಯು ಅಣಿಯಾಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

Related posts: