RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಮಾನವರ ಬದುಕನ್ನು ಬದಲಾವಣೆ ಮಾಡುತ್ತಿರುವ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಪ್ರೋ ಆರೋಗ್ಯಸ್ವಾಮಿ ಎ.ಕೆ. ಸಲಹೆ

ಗೋಕಾಕ:ಮಾನವರ ಬದುಕನ್ನು ಬದಲಾವಣೆ ಮಾಡುತ್ತಿರುವ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಪ್ರೋ ಆರೋಗ್ಯಸ್ವಾಮಿ ಎ.ಕೆ. ಸಲಹೆ 

ಮಾನವರ ಬದುಕನ್ನು ಬದಲಾವಣೆ ಮಾಡುತ್ತಿರುವ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಪ್ರೋ ಆರೋಗ್ಯಸ್ವಾಮಿ ಎ.ಕೆ. ಸಲಹೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 15 :

 

ಮಾನವರ ಬದುಕನ್ನು ಬದಲಾವಣೆ ಮಾಡುತ್ತಿರುವ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ಧಾರವಾಡದ ಸೆಂಟ್ ಜೋಸೆಫ್ ಕಾಲೇಜಿನ ಪ್ರೋ ಆರೋಗ್ಯಸ್ವಾಮಿ ಎ.ಕೆ ಹೇಳಿದರು.

ಶನಿವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಸಿದ್ದಲಿಂಗೇಶ್ವರ ಬಿ.ಸಿ.ಎ ಕಾಲೇಜಿನಲ್ಲಿ ಹಮ್ಮಿಕೊಂಡ ಒರಂಟೇಎಶನ್ ಪ್ರೋಗ್ರಾಮ್ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ತಾಂತ್ರಿಕ ಯುಗದಲ್ಲಿ ಕಂಪ್ಯೂಟರ್ ಎಲ್ಲಾ ಕ್ಷೇತ್ರಗಳಲ್ಲಿಯೂ ಮಹತ್ವದ ಸ್ಥಾನ ಪಡೆದಿದೆ. ಕಂಪ್ಯೂಟರ್ ಕಲಿತ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗವಕಾಶಗಳಿವೆ. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕೌಶಲ್ಯಗಳನ್ನು ವೃದ್ಧಿಸಿಕೊಂಡು ಧನಾತ್ಮಕ ಚಿಂತನೆಗಳೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನ ಶೀಲರಾದರೆ ಯಶಸ್ಸು ನಿಶ್ಚಿತ ಸೋಲು ಗೆಲುವಿನ ಸೋಪಾನ ಎಂದು ತಿಳಿದು ಕಷ್ಟ ಪಟ್ಟರೆ ಮುಂದೆ ಸುಖ ಸಿಗುವುದು. ಇಂದಿನ ತಂತ್ರಜ್ಞಾನದ ಸದುಪಯೋಗದಿಂದ ತಂದೆ ತಾಯಿಗಳ ಪರಿಶ್ರಮಕ್ಕೆ ತಕ್ಕ ಫಲನೀಡಿ ತಮ್ಮ ಬದುಕನ್ನು ಉಜ್ವಲಗೊಳಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಡಾ.ಸಿ.ಕೆ ನಾವಲಗಿ, ಆಡಳಿತಾಧಿಕಾರಿ ಅಡಿವೇಶ ಗವಿಮಠ ಇದ್ದರು

Related posts: