RNI NO. KARKAN/2006/27779|Tuesday, August 11, 2026
You are here: Home » breaking news » ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಗೋಕಾಕ:ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ 

ಶ್ರೀ ಸಿದ್ದಲಿಂಗೇಶ್ವರ ಬಿಸಿಎ ಕಾಲೇಜ್ ವಿದ್ಯಾರ್ಥಿಗಳ ಸಾಧನೆ

ಗೋಕಾಕ ಡಿ 7  : ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಸಿಎ 4ನೇ ಸೆಮಿಸ್ಟರ್ 2021-2022 ರ ಫಲಿತಾಂಶ ಪ್ರಕಟಗೊಂಡಿದ್ದು,ನಗರದ ಶೂನ್ಯಸಂಪಾದನಮಠದ ಚನ್ನಬಸವೇಶ್ವರ ವಿದ್ಯಾಪೀಠದ ಸಿದ್ದಲಿಂಗೇಶ್ವರ ಬಿಸಿಎ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಬಿಸಿಎ 4ನೇ ಸೆಮಿಸ್ಟರ್‍ನಲ್ಲಿ ತೇಜಸ್ವಿನಿ ಪತ್ತಾರ(86.27)ಪ್ರಥಮ, ಎರೇನಾ ಶೇಖಜೀ(86.31)ದ್ವಿತೀಯ, ಹಾಗೂ ಶಿಲ್ಪಾ ಗೌಡರ್(83.02)ತೃತೀಯ ಸ್ಥಾನ ಗಳಿಸಿ ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳಿಗೆ ಶ್ರೀ ಮುರಘರಾಜೇಂದ್ರ ಸ್ವಾಮೀಜಿ, ಆಡಳಿತಾಧಿಕಾರಿಗಳು, ಪ್ರಾಚಾರ್ಯರು, ಸಿಬ್ಬಂದಿವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Related posts: