RNI NO. KARKAN/2006/27779|Tuesday, December 2, 2025
You are here: Home » breaking news » ಗೋಕಾಕ:ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ

ಗೋಕಾಕ:ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ 

ಶ್ರೀ ಸಾಯಿ ಸಮರ್ಥ ಫೌಂಡೇಷನ್ ವತಿಯಿಂದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ

ಗೋಕಾಕ ಜ 2 : ಇಲ್ಲಿಯ ಶ್ರೀ ಸಾಯಿ ಸಮರ್ಥ ಫೌಂಡೇಷನ್ ಆಶ್ರಯದಲ್ಲಿ ಸೋಮವಾರದಂದು ನಗರದ ಬೆಳಕು ಆಸ್ಪತ್ರೆಯಲ್ಲಿ ಆರ್ಥಿಕವಾಗಿ ಹಿಂದುಳಿದ 24 ಜನರಿಗೆ ಉಚಿತವಾಗಿ ನೇತ್ರ ಶಸ್ತ್ರಚಿಕಿತ್ಸೆ ಮಾಡಿಸಲಾಯಿತು.
ಫೌಂಡೇಷನ್ ಅಧ್ಯಕ್ಷ ಅರುಣ ಸಾಲಹಳ್ಳಿ ಅವರು ಮಾತನಾಡಿ ನಮ್ಮ ಸಂಸ್ಥೆಯ ವತಿಯಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಆರ್ಥಿಕವಾಗಿ ಹಿಂದುಳಿದ ಜನರಿಗೆ ಬಲ ತುಂಬುವ ಕಾರ್ಯವನ್ನು ಮಾಡಲಾಗುತ್ತಿದೆ. ಈಗಾಗಲೇ ಒಟ್ಟು 46 ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆಯ ಮಾಡಿಸುವ ಮೂಲಕ ಅವರ ಕಣ್ಣಾಗುವ ಕಾರ್ಯವನ್ನು ಮಾಡಿದ್ದೇವೆ. ಅಲ್ಲದೇ ಮುಂಬರುವ ದಿನಗಳಲ್ಲಿ ರೋಗಿಗಳಿಗೆ ನೆರವಾಗುವಂತಹ ಸಾಧನ-ಸಲಕರಣೆಗಳನ್ನು ವಿತರಿಸುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನೇತ್ರ ತಜ್ಞ ಡಾ|| ಎತ್ತಿನಮನಿ, ವೀರಭದ್ರ ಜಂತಿ, ಆನಂದ ಪಾಟೀಲ, ಸಂಜು ಚಿಪ್ಪಲಕಟ್ಟಿ, ಸುನೀಲ ಹಿರಗನ್ನವರ ಸೇರಿದಂತೆ ಅನೇಕರು ಇದ್ದರು.

Related posts: