RNI NO. KARKAN/2006/27779|Saturday, February 14, 2026
You are here: Home » breaking news » ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು : ಸಿ.ಬಿ.ಪಾಗದ

ಗೋಕಾಕ:ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು : ಸಿ.ಬಿ.ಪಾಗದ 

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು : ಸಿ.ಬಿ.ಪಾಗದ

ಗೋಕಾಕ ಫೆ 11 : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆದು ಒಳ್ಳೆಯ ನಾಗರಿಕರಾಗಬೇಕು ಎಂದು ಮಯೂರ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸಿ.ಬಿ.ಪಾಗದ ಹೇಳಿದರು.
ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ  ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ಮಹತ್ತರ ಘಟ್ಟವಾಗಿದ್ದು, ಕಠಿಣ ಪರಿಶ್ರಮದಿಂದ ಅದನ್ನು ಸಾರ್ಥಕ ಪಡೆಸಿಕೊಳ್ಳಬೇಕು. ತಮಗೆ ಆಸಕ್ತಿ ಇರುವ ವಿಷಯದ ಆಯ್ಕೆಯೊಂದಿಗೆ ಉನ್ನತ ವ್ಯಾಸಂಗ ಮಾಡಿ , ಉನ್ನತ ಹುದ್ದೆ ಅಲಂಕರಿಸಿ ಸಮಾಜದಲ್ಲಿ ಗೌರವ ಸ್ಥಾನವನ್ನು ಸಂಪಾದಿಸಬೇಕು ಎಂದು ಹೇಳಿದರು.
ವೇದಿಕೆಯಲ್ಲಿ ಪ್ರಾಚಾರ್ಯ ಅರುಣ್ ಪೂಜೇರ, ಉಪ ಪ್ರಾಚಾರ್ಯ ಕೆ.ಎಲ್.ಗುಂಡ್ಯಾಗೋಳ, ಉಪನ್ಯಾಸಕರಾದ ಎಸ್.ಎಂ ಮುಲ್ಲಾ, ಎಸ್.ಜಿ.ಬಾಗಾಯಿ, ವಿದ್ಯಾರ್ಥಿ ಪ್ರತಿನಿಧಿಗಳಾದ ರೆಹಾನ ಪೀರಜಾದೆ, ಚೈತ್ರಾ ಮುರಗೋಡ ಇದ್ದರು.

Related posts: