ನವದೆಹಲಿ:ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, 10ರಂದು ಮತದಾನ, 13ಕ್ಕೆ ಫಲಿತಾಂಶ: ಚುನಾವಣಾ ಆಯೋಗ

ಕರ್ನಾಟಕ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ, 10ರಂದು ಮತದಾನ, 13ಕ್ಕೆ ಫಲಿತಾಂಶ: ಚುನಾವಣಾ ಆಯೋಗ
ನವದೆಹಲಿ/ ಬೆಂಗಳೂರು ಮಾ 29 : ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಇಂದು(ಮಾರ್ಚ್ 29) ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಇನ್ನು ಈಗಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.