RNI NO. KARKAN/2006/27779|Sunday, July 13, 2025
You are here: Home » breaking news » ಗೋಕಾಕ:ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ

ಗೋಕಾಕ:ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ 

ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ತವರಿನಲ್ಲಿ ಭವ್ಯ ಸ್ವಾಗತ

ಗೋಕಾಕ ಜೂ 4 : ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಸಾಧಿಸಿ ನಂತರ ಸಾಯಂಕಾಲ ಗೋಕಾಕ ನಗರಕ್ಕೆ ಆಗಮಿಸಿದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಜಾರಕಿಹೊಳಿ ಕುಟುಂಬದ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸ್ವಾಗತ ಕೋರಿದರು.
ನಗರದ ಸಂಗೋಳ್ಳಿ ರಾಯಣ್ಣ ಪ್ರತಿಮೆ, ಬಸವೇಶ್ವರ ಪ್ರತಿಮೆ, ಡಾ‌.ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಚುನಾವಣೆಯಲ್ಲಿ ತಮ್ಮ ಪರವಾಗಿ ದುಡಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಿದರು.
ನಂತರ ಮನೆಗೆ ತೆರಳಿದ ಅವರಿಗೆ ಮನೆಯಲ್ಲಿ ಆರತಿ ಮಾಡಿ ಸ್ವಾಗತಿಸಲಾಯಿತ್ತು.

Related posts: