ಗೋಕಾಕ:ಕೆಎಲ್ಇ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುತ್ತಿದೆ : ಜಯಾನಂದ ಮುನ್ನವಳ್ಳಿ
ಕೆಎಲ್ಇ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುತ್ತಿದೆ : ಜಯಾನಂದ ಮುನ್ನವಳ್ಳಿ
ಗೋಕಾಕ ನ 13 : ಗುಣಮಟ್ಟದ ಶಿಕ್ಷಣವನ್ನು ಜನಸಾಮಾನ್ಯರಿಗೆ ನೀಡುವ ಉದ್ದೇಶದಿಂದ ಸಪ್ತರ್ಷಿಗಳಿಂದ ಸ್ಥಾಪನೆಗೊಂಡ ಕೆ.ಎಲ್.ಇ ಸಂಸ್ಥೆ ಇಂದು ದೇಶ ವಿದೇಶಗಳಲ್ಲಿ ತಮ್ಮ ಕೀರ್ತಿಯನ್ನು ಹರಡುತ್ತಿದೆ ಎಂದು ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನವಳ್ಳಿ ಹೇಳಿದರು.
ಬುಧವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಮಹಾವಿದ್ಯಾಲಯದಲ್ಲಿ ಕೆಎಲ್ಇ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಟ್ಯಾಲೆಂಟ್ ಎಕ್ಸ್ಪೋ ಸಮಾರಂಭದವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಎಲ್ಇ ಸಂಸ್ಥೆ ಇಂದು ಡಾ.ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉದ್ಯೋಗವನ್ನು ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಗರದಲ್ಲಿಯೂ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಿ ಪ್ರತಿವರ್ಷ 200 ವಿದ್ಯಾರ್ಥಿಗಳಿಗೆ ಉದ್ಯೋಗವನ್ನು ಕಲ್ಪಿಸುತ್ತಿದೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರನ್ನು ಸಾಧಕರನ್ನಾಗಿ ಮಾಡುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯು ಪ್ರತಿಭೆ ಇದ್ದು, ಅದನ್ನು ಪ್ರೋತ್ಸಾಹಿಸಲು ಇಂತಹ ವೇದಿಕೆಗಳನ್ನು ಕಲ್ಪಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಾಧಕರ ವಿಶೇಷ ಸನ್ಮಾದಲ್ಲಿ ತಹಶೀಲ್ದಾರ ಡಾ.ಮೋಹನ ಭಸ್ಮೆ ಹಾಗೂ ಛಾಯಾಶ್ರೀ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ ಬಿ.ಪ್ರಭಾಕರ ( ಪ್ರವೀಣ್) ಅವರನ್ನು ಸತ್ಕರಿಸಲಾಯಿತು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಜೀತ್ ಮನ್ನಿಕೇರಿ, ಜಿ.ಬಿ.ಬಳಗಾರ, ಕೆಎಲ್ಇ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಡಿ.ಚುನಮರಿ, ಆಡಳಿತಾಧಿಕಾರಿ ಜಿ.ಎಂ ಅಂದಾನಿ, ಓಂಪ್ರಕಾಶ್ ಅಂಗಡಿ, ಪ್ರಾಚಾರ್ಯರಾದ ಕೆ.ಬಿ.ವೆವುಂಡಿಮಠ, ಎಂ.ಎ ಪಾಟೀಲ, ಅಮೃತ ಜಕ್ಕಲಿ ಇದ್ದರು.
