ಗೋಕಾಕ:ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ

ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ
ಗೋಕಾಕ ಏ 8 : ನಗರದ ಕೆಎಲ್‍ಇ ಸಂಸ್ಥೆಯ ಸಿ ಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆಯ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಸಂಭ್ರಮ ಸತ್ತಿಗೇರಿ 591 (98.5)ಅಂಕ ಪಡೆದು ರಾಜ್ಯಕ್ಕೆ 9ನೇ ರ್ಯಾಂಕ, ಕಲಾ ವಿಭಾಗದಲ್ಲಿ ಐಶ್ವರ್ಯ ವಣಕಿ 590(98.33) ಅಂಕ ಪಡೆದು 11ನೇ ರ್ಯಾಂಕ, ವಾಣಿಜ್ಯ ವಿಭಾಗದಲ್ಲಿ ಅನಿತಾ ಗೌಡರ 589(97) ಅಂಕ ಪಡೆದು ಜಿಲ್ಲೆಗೆ 7ನೇ ಸ್ಥಾನ ಪಡೆದಿದ್ದಾರೆ. ಹಾಗೂ 177 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ಪಾಸಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ ಹಾಗೂ ಆಡಳಿತ ಮಂಡಳಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಾಚಾರ್ಯರಾದ ಮಲ್ಲಿಕಾರ್ಜುನ ಕೌಜಲಗಿ, ಎಮ್ ಎ ಪಾಟೀಲ, ಅಮೃತ ಜಕ್ಕಲಿ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂಧಿ ಅಭಿನಂಧಿಸಿದ್ದಾರೆ.