ಗೋಕಾಕ:ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಆಯ್ಕೆ

ಮುಖ್ಯಮಂತ್ರಿ ಪದಕಕ್ಕೆ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಆಯ್ಕೆ
ಗೋಕಾಕ ಜು 12 : ನಗರದ ನಿವಾಸಿ, ಸವದತ್ತಿ ಅರಣ್ಯ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಅವರು 2024ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
ಅರಣ್ಯ ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ವಲಯ ಅರಣ್ಯಾಧಿಕಾರಿ ಸಂಜೀವ ಸಂಸುದ್ದಿ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದ್ದಾರೆ. ಈ ಹಿಂದೆ ಗೋಕಾಕ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.