ಬೆಳಗಾವಿ:ಶಾಸಕರ ಅಭಿಪ್ರಾಯ ಪಡೆದು ಬೆಳಗಾವಿ ಜಿಲ್ಲಾ ವಿಭಜನೆಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಶಾಸಕರ ಅಭಿಪ್ರಾಯ ಪಡೆದು ಬೆಳಗಾವಿ ಜಿಲ್ಲಾ ವಿಭಜನೆಗೆ ಕ್ರಮ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ ಡಿ 8 : ಬೆಳಗಾವಿ ಜಿಲ್ಲೆಯ ಎಲ್ಲಾ ಶಾಸಕರ ಅಭಿಪ್ರಾಯ ಪಡೆದು ಬೆಳಗಾವಿ ಜಿಲ್ಲೆ ವಿಭಜಿಸುವ ಕುರಿತು ಚಿಂತನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಗೋಕಾಕ ನಿಯೋಜಿತ ಜಿಲ್ಲಾ ಚಾಲನಾ ಸಮಿತಿ ಮತ್ತು ವಕೀಲರ ಸಂಘದ ಸದಸ್ಯರನ್ನು ಒಳಗೊಂಡ ಭೇಟಿಯಾದ ನಿಯೋಗದ ಮನವಿ ಸ್ವೀಕರಿಸಿ ಅವರು ಮಾತನಾಡಿದ ಅವರು ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಬೆಳಗಾವಿ ಜಿಲ್ಲೆ ವಿಭಜನೆ ಮಾಡಿ 2 ಜಿಲ್ಲೆ ಮಾಡಬೇಕೊ ಅಥವಾ 3 ಜಿಲ್ಲೆ ಮಾಡಬೇಕು ಎಂಬುದು ಪ್ರಶ್ನೆಯಾಗಿದೆ. ಅದಕ್ಕಾಗಿ ಬೆಳಗಾವಿ ಜಿಲ್ಲೆಯ ಎಲ್ಲಾ 18 ಶಾಸಕರನ್ನು ಕರೆಯಿಸಿ ಸಭೆ ಮಾಡಿ ಅವರ ಅಭಿಪ್ರಾಯಗಳನ್ನು ಪಡೆದು ಜಿಲ್ಲೆಯ ವಿಭಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಿಯೋಗಕ್ಕೆ ಮುಖ್ಯಮಂತ್ರಿ ಭರವಸೆ ನೀಡಿದರು.
ನಿಯೋದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಹುಲ್ ಜಾರಕಿಹೊಳಿ, ಸರ್ವೊತ್ತಮ ಜಾರಕಿಹೊಳಿ, ಹೋರಾಟ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳು, ಡಾ. ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಡಾ. ಅಮರಸಿದ್ದೇಶ್ವರ ಮಹಾಸ್ವಾಮಿಗಳು, ಶ್ರೀ ನಿಜಗುಣ ಮಹಾಸ್ವಾಮಿಗಳು, ಮುಖಂಡರುಗಳಾದ ಅಶೋಕ ಪೂಜಾರಿ, ಡಾ.ಮಹಾಂತೇಶ ಕಡಾಡಿ, ವಕೀಲರ ಸಂಘದ ಅಧ್ಯಕ್ಷ ಸುಭಾಷ್ ಪಾಟೀಲ, ಎಂ.ಎಚ್.ಹತ್ತಿಕಟಗಿ, ಶಂಕರ ಗೋರೋಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
