RNI NO. KARKAN/2006/27779|Sunday, August 3, 2025
You are here: Home » breaking news » ಬೆಳಗಾವಿ:ಗ್ರಾ.ಪಂ ಕಟ್ಟಡಕ್ಕಾಗಿ 36.10 ಕೋಟಿ ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಚ್.ಕೆ.ಪಾಟೀಲ್

ಬೆಳಗಾವಿ:ಗ್ರಾ.ಪಂ ಕಟ್ಟಡಕ್ಕಾಗಿ 36.10 ಕೋಟಿ ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಚ್.ಕೆ.ಪಾಟೀಲ್ 

ಗ್ರಾ.ಪಂ ಕಟ್ಟಡಕ್ಕಾಗಿ 36.10 ಕೋಟಿ ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಚ್.ಕೆ.ಪಾಟೀಲ್

ಬೆಳಗಾವಿ ನ 15 : ರಾಜ್ಯದಲ್ಲಿ ಹೊಸದಾಗಿ 462 ಗ್ರಾಮ ಪಂಚಾಯತಿಗಳ ಪೈಕಿ ಈಗಾಗಲೇ 361 ಗ್ರಾಮ ಪಂಚಾಯತಿಗಳ ಕಟ್ಟಡಕ್ಕಾಗಿ ತಲಾ 10 ಲಕ್ಷ ರೂ.ಗಳಂತೆ ಒಟ್ಟು 36.10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಎಚ್.ಕೆ. ಪಾಟೀಲ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ಬುಧವಾರದಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, ಹೈದ್ರಾಬಾದ ಕರ್ನಾಟಕ ಪ್ರದೇಶ ವ್ಯಾಪ್ತಿಯ 124 ಗ್ರಾಮ ಪಂಚಾಯತಿಗಳಿಗೆ ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ಧಿ ವತಿಯಿಂದಲೂ ಅನುದಾನ ಕೋರಲಾಗಿದೆ ಎಂದು ತಿಳಿಸಿದರು.

ಹೊಸ ಗ್ರಾಮ ಪಂಚಾಯತಿಗಳ ಕಟ್ಟಡಕ್ಕಾಗಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೂ. 16.25 ಲಕ್ಷ ಹಾಗೂ 14ನೇ ಹಣಕಾಸು ಯೋಜನೆಯಡಿ 3.75 ಲಕ್ಷ ರೂ.ಗಳು ಸೇರಿದಂತೆ ಸರ್ಕಾರದ ವತಿಯಿಂದ 20 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಬೆಳಗಾವಿ ಜಿಲ್ಲೆಗೆ 2014-15ನೇ ಸಾಲಿನ ಕೇಂದ್ರ ಪುರಸ್ಕøತ ರಾಜೀವ್ ಗಾಂಧಿ ಪಂಚಾಯತಿ ಸಶಕ್ತೀಕರಣ ಅಭಿಯಾನ ಯೋಜನೆಯಡಿ 14 ಗ್ರಾಮ ಪಂಚಾಯತಿಗಳ ಕಟ್ಟಡ ನಿರ್ಮಾಣಕ್ಕೆ ತಲಾ 15 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಪಿಡಿಓ ನೇಮಿಸಿ : ಅರಭಾವಿ ಮತಕ್ಷೇತ್ರವೂ ಸೇರಿದಂತೆ ಬೆಳಗಾವಿ ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಪಿಡಿಓ ಕೊರತೆ ಇದೆ. ಮೂರು ಗ್ರಾಮ ಪಂಚಾಯತಿಗಳಿಗೆ ಒಬ್ಬರೇ ಪಿಡಿಓ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅಭಿವೃದ್ಧಿಗೆ ಹಿನ್ನೆಡೆಯಾಗುತ್ತಿದೆ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮ ಪಂಚಾಯತಿಗೊಬ್ಬರಂತೆ ಪಿಡಿಓ ಗಳನ್ನು ನೇಮಕ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವರ ಗಮನಕ್ಕೆ ತಂದರು.
ಪಿಡಿಓ ನೇಮಕಕ್ಕೆ ಕೆಎಟಿಯಿಂದ ತಡೆಯಾಜ್ಞೆ ಬಂದಿದ್ದರಿಂದ ವಿಳಂಭವಾಗಿದೆ. ಈಗ ತಡೆಯಾಜ್ಞೆ ತೆರವುಗೊಂಡಿದ್ದರಿಂದ ಶೀಘ್ರದಲ್ಲಿಯೇ ಗ್ರಾಮ ಪಂಚಾಯತಿಗಳಿಗೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಉತ್ತರಿಸಿದರು.

Related posts: