ಖಾನಾಪುರ:ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಪ್ರಬಂದ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಖಾನಾಪುರ ನ 22: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಕರ್ನಾಟಕ ರಾಜ್ಯ ವಿಧ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ರಾಷ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಟಾನ ಬೆಂಗಳೂರು ಹಾಗೂ ಉಪನಿರ್ದೆಶಕರ ಕಾರ್ಯಾಲಯ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ನವೆಂಬರ 20ರಂದು ಬೆಳಗಾವಿಯ ಮಹಿಳಾ ವಿದ್ಯಾಲಯದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಜಿಲ್ಲಾಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು ನಡೆದವು.
ತಾಲೂಕಿನ ಲಿಂಗನಮಠ ಸರಕಾರಿ ಪ್ರೌಢ ಶಾಲೆ ಕನ್ನಡ ಶಿಕ್ಷಕ ಶ್ರೀ ಎಮ್.ಬಿ.ಉಗ್ನಿಕೇರಿ ರವರು ಪ್ರಬಂಧ ಸ್ಪರ್ದೆಯಲ್ಲಿ ಭಾಗವಹಿಸಿ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಈ ಸಾಧನೆಗೆ ಮುಖ್ಯೋಧ್ಯಾಪಕಿ ಶ್ರೀಮತಿ ಜೆ.ಎಲ್.ಭಂಡಾರಿ, ಶಾಲೆಯ ಸಹಶಿಕ್ಷಕರು, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮತ್ತು ಸದಸ್ಯರು ಪ್ರಶಂಶಿಸಿದ್ದಾರೆ.