ಗೋಕಾಕ:ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್

ರೈತರು ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಳ್ಳಿ : ಅಂಬಿರಾವ್ ಪಾಟೀಲ್
ಗೋಕಾಕ ಆ 6 : ರೈತರು ತಮ್ಮ ಕೃಷಿಯಲ್ಲಿ ಆಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಿರೆಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.
ಗುರುವಾರದಂದು ನಗರದ ಶಾಸಕರ ಕಾರ್ಯಾಲಯದ ಆವರಣದಲ್ಲಿ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳಾದ ನೇಗಿಲು, ರೋಟರವೆಟರ್, ಪವರ್ ಟೆಲ್ಲರ್, ರೆಂಟೆ ಹಾಗೂ ಮೇವು ಕಟಾವು ಯಂತ್ರಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.
ರೈತರು ದೇಶದ ಬೆನ್ನಲುಬಾಗಿದ್ದು ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು ಇದರ ಸದುಪಯೋಗದಿಂದ ಕೃಷಿಯಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ ಆರ್ಥಿಕವಾಗಿ ಸದೃಢರಾಗಿರೆಂದು ಕರೆ ನೀಡಿದರು.
ಡಿಸಿಸಿ ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ಯಂತ್ರೋಪಕರಣ, ಬಿತ್ತನೆ ಬೀಜ, ರಸಗೊಬ್ಬರ, ಹನಿ ನೀರಾವರಿ ಇವುಗಳ ಸೌಲಭ್ಯದಿಂದ ಹೆಚ್ಚಿನ ಇಳುವರಿ ತೆಗೆದು ಆರ್ಥಿಕವಾಗಿ ಮುಂದೆ ಬರುವಂತೆ ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೃಷಿ ಜಂಟಿ ನಿರ್ದೇಶಕ ಎಚ್ ಡಿ ಕೊಳೇಕರ, ಸಹಾಯಕ ನಿರ್ದೇಶಕ ಎಮ್ ಎಮ್ ನದಾಫ, ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ, ಅಶೋಕ ಗೋಣಿ, ಸಗೀರ ಕೋತವಾಲ ಸೇರಿದಂತೆ ಅನೇಕರು ಇದ್ದರು.
