RNI NO. KARKAN/2006/27779|Thursday, September 17, 2026
You are here: Home » breaking news » ಗೋಕಾಕ:ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ

ಗೋಕಾಕ:ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ 

ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪನೆ

ಗೋಕಾಕ ಸೆ.17: ಗೋಕಾಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಈ ಬಾರಿ ಪರಿಸರ ಸ್ನೇಹಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು. ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಶೇಗಣಿಯಿಂದ ತಯಾರಿಸಲಾದ ಚಿಕ್ಕ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಹಬ್ಬ ಆಚರಿಸುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸುವ ಪ್ರಯತ್ನವನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೈಗೊಂಡರು. ಶೇಗಣಿ ಸೇರಿದಂತೆ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಮೂರ್ತಿಗಳ ಬಳಕೆಯಿಂದ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದು, ಗಣೇಶನಿಗೆ ಪೂಜೆ ಸಲ್ಲಿಸಿದರು.

Related posts: