RNI NO. KARKAN/2006/27779|Monday, February 16, 2026
You are here: Home » breaking news » ಬೆಳಗಾವಿ:ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆಗೆ ಯತ್ನ : ಬೆಳಗಾವಿಯಲ್ಲಿ ಹಾಡು ಹಗಲೇ ಘಟನೆ

ಬೆಳಗಾವಿ:ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆಗೆ ಯತ್ನ : ಬೆಳಗಾವಿಯಲ್ಲಿ ಹಾಡು ಹಗಲೇ ಘಟನೆ 

ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಗೆ ಚೂರಿ ಇರಿದು ಕೊಲೆಗೆ ಯತ್ನ : ಬೆಳಗಾವಿಯಲ್ಲಿ ಹಾಡು ಹಗಲೇ ಘಟನೆ

ಬೆಳಗಾವಿ ಏ 19: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಮಧ್ಯಾಹ್ನ ಬೆಳಗಾವಿ ಕೋರ್ಟ್ ಆವರಣದಲ್ಲಿ ನಡೆದಿದೆ
ಶಿರಸಿ ಮೂಲದ ನಿಖಿಲ್ ಸುರೇಶ ಧಾವಳೆ (32) ಗಾಯಗೊಂಡಿರುವ ವ್ಯಕ್ತಿ. ಬಲಬದಿ ಬೆನ್ನಿಗೆ ಚೂರಿಯಿಂದ ಇರಿಯಲಾಗಿತ್ತು. ಸ್ಥಳೀಯರು ಹಾಗೂ ಪೊಲೀಸರು ಗಾಯಾಳು ನಿಖಿಲ್‌ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಿಖಿಲ್ ಆರೋಗ್ಯದಲ್ಲಿ‌ ಚೇತರಿಕೆ ಕಂಡಿದ್ದು, ಯಾವುದೇ ಅಪಾಯ ಇಲ್ಲ ಎಂದು‌ ವೈದ್ಯರು ತಿಳಿಸಿದ್ದಾರೆ.

ಘಟನೆಗೆ ಕಾರಣ?
ಕೌಟುಂಬಿಕ ಕಲಹದಿಂದ ನಿಖಿಲ್ ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರಣೆ ಬೆಳಗಾವಿ ಜಿಲ್ಲಾ ಕೌಟುಂಬಿಕ‌ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಗುರುವಾರ ವಿಚಾರಣೆಗಾಗಿ ಕೋರ್ಟ್‌ಗೆ ಆಗಮಿಸಿದಾಗ ನಿಖಿಲ್ ಪತ್ನಿಯ ಸಹೋದರ ಚೂರಿ ಇರಿದು ಪರಾರಿಯಾಗಿದ್ದಾನೆ. 

ಈ ಘಟನೆ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. 

Related posts: