RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಜಾಗ್ರತಿ ಜಾಥಾ

ಗೋಕಾಕ:ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಜಾಗ್ರತಿ ಜಾಥಾ 

ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ, ನಗರದ ಸ್ವಚ್ಛತೆಗೆ ಸಹಕರಿಸಿ” ಎಂಬ ಜಾಗ್ರತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ನಗರ ಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಡ್ರಮ್ ಬಾರಿಸುವ ಮೂಲಕ ಚಾಲನೆ ನೀಡಿದರು.

ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ ಜಾಗ್ರತಿ ಜಾಥಾ

ಗೋಕಾಕ ಜೂ 5 : “ಪ್ಲಾಸ್ಟಿಕ್ ತ್ಯಜಿಸಿ, ಪರಿಸರ ಉಳಿಸಿ, ನಗರದ ಸ್ವಚ್ಛತೆಗೆ ಸಹಕರಿಸಿ” ಎಂಬ ಜಾಗ್ರತಿ ಜಾಥಾ ಕಾರ್ಯಕ್ರಮಕ್ಕೆ ಮಂಗಳವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ನಗರ ಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ ಡ್ರಮ್ ಬಾರಿಸುವ ಮೂಲಕ ಚಾಲನೆ ನೀಡಿದರು.
ನಗರ ಸಭೆಯ ಆಶ್ರಯದಲ್ಲಿ ಜರುಗಿದ ಈ ಜಾಥಾ ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡು ಬಿತ್ತಿಪತ್ರಗಳೊಂದಿಗೆ ಮೆರವಣಿಗೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ನಗರ ಸಭೆ ಉಪಾಧ್ಯಕ್ಷೆ ವಿಜಯಲಕ್ಷಿ ಜತ್ತಿ, ಪೌರಾಯುಕ್ತ ವಾಸನ್ ಆರ್. ರೋಟರಿ ಸಂಸ್ಥೆಯ ಸೋಮಶೇಖರ ಮಗದುಮ್ಮ, ಜೆಸಿಐ ಸಂಸ್ಥೆಯ ಅಧ್ಯಕ್ಷ ಜಿ.ಆರ್.ನಿಡೋಣಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವ್ಹಿ.ಎಸ್.ತಡಸಲೂರ, ಪರಿಸರ ಅಭಿಯಂತರ ಎಂ.ಎಚ್.ಗಜಾಕೋಶ, ಹಿರಿಯ ಆರೋಗ್ಯ ನಿರೀಕ್ಷಕರಾದ ಜೆ.ಸಿ.ತಾಂಬೋಳಿ, ಆರ್,ಎಸ್,ರಂಗಸುಭೆ, ಕೆ.ಎಸ್.ಕೋಳಿ, ಶಿಕ್ಷಣ ಇಲಾಖೆಯ ವಿಜಯಕುಮಾರ ಸೂಲೆಗಾಂವಿ ಸೇರಿದಂತೆ ಅನೇಕರು ಇದ್ದರು.

Related posts: