ಗೋಕಾಕ:ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನ: ಎ. ಡಿ. ಸವದತ್ತಿ
ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನ: ಎ. ಡಿ. ಸವದತ್ತಿ
ಗೋಕಾಕ ಜು 9 : 2018-19 ನೇ ಸಾಲಿಗೆ ಕೃಷಿ ಇಲಾಖೆಯ ಆತ್ಮ (ATMA ) ಯೋಜನೆಯ ಅಡಿಯಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಕೃಷಿ, ಮೀನುಗಾರಿಕೆ, ಕೃಷಿ ಯಾಂತ್ರೀಕರಣ, ಸೌರ ವಿದ್ಯುತ್ ಅಳವಡಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ರೈತರಿಗೆ ತಾಲೂಕಾ ಮಟ್ಟದಲ್ಲಿ 5 ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಒಟ್ಟು 10 ಜನ ರೈತರಿಗೆ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ, ಮತ್ತು ಜಿಲ್ಲಾ ಮಟ್ಟದಲ್ಲಿ ಒಟ್ಟು 5 ಶ್ರೇಷ್ಠ ಆತ್ಮ ಆಸಕ್ತ ರೈತರ ಗುಂಪುಗಳ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ.
ಆಸಕ್ತ ರೈತರು ಅರ್ಜಿ ನಮೂನೆಯನ್ನು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆಯಬಹುದಾಗಿದೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಜು 30ರ ಸಾಯಂಕಾಲ 5 ಗಂಟೆ ರೊಳಗಾಗಿ ಸಲ್ಲಿಸತಕ್ಕದ್ದು. ತಡವಾಗಿ ಸಲ್ಲಿಸಿದ ಹಾಗೂ ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈಗಾಗಲೇ ಸರ್ಕಾರದಿಂದಾಗಲೀ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದಾಗಲೀ ಈ ಪ್ರಶಸ್ತಿಗೆ ಸಮನಾದ ಪ್ರಶಸ್ತಿಗಳನ್ನ ಪಡೆದ ರೈತರು ಹಾಗೂ ಅವರ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಆದರೆ ತಾಲೂಕಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತ ಒಂದೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರನ್ನು ಅಥವಾ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಎ. ಡಿ. ಸವದತ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ .