RNI NO. KARKAN/2006/27779|Saturday, August 2, 2025
You are here: Home » breaking news » ಮೂಡಲಗಿ:ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ

ಮೂಡಲಗಿ:ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ 

ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ

 
ಮೂಡಲಗಿ ಜು 30 : ಮಹಿಳೆಯರಲ್ಲಿ ಸಂಘಟನಾ ಶಕ್ತಿ ಹೆಚ್ಚಿಸುವುದು ಮತ್ತು ಸಮಾಜದಲ್ಲಿ ಸ್ತ್ರೀಯರಿಗೆ ಗೌರವ ಸಿಗಬೇಕೆನ್ನುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯು ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಹಲವೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಶ್ರೀ ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಬೆಳಗಾವಿ 2 ನಿರ್ದೇಶಕ ಸುರೇಶ ಮೊಯ್ಲಿ ಹೇಳಿದರು.

ಅವರು ಸಮೀಪದ ಕಲ್ಲೋಳಿಯ ಸರಕಾರಿ ಕನ್ನಡ ಗಂಡುಮಕ್ಕಳ ಶಾಲೆಯಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ರಕ್ತಹೀನತೆ ತಪಾಸನೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದರು.
ಶ್ರೀ ಸಾಯಿ ಸಮಿತಿ ಅಧ್ಯಕ್ಷ ಸುರೇಶ ಕಬ್ಬೂರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸ್ತೂರಿ ಕುರಬೇಟ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಭಾರತಿಕೋಣಿ, ಡಾ.ಅಶ್ವಿನಿ ಭಾಗವಹಿಸಿ ಸದಸ್ಯರಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ರಕ್ತ ತಪಾಸಣೆ ಮಾಡಿದರು.

ಪ್ರಧಾನ ಗುರು ಎಸ್.ಎಸ್ ನಾಯಕವಾಡಿ, ವಲಯದ ಮೇಲ್ವಿಚಾರಕರಾದ ಸಂಜಯ ನಾಯ್ಕ, ಜ್ಞಾನವಿಕಾಸ ಸಮ್ವಯಾಧಿಕಾರಿ ಸುಜಾತಾ ಸೇವಾ ಪ್ರತಿನಿಧಿ ಶೋಭಾ ಹಿರೇಮಠ ಉಪಸ್ಥಿತರಿದ್ದರು.

Related posts: