RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಆಚರಣೆ

ಗೋಕಾಕ:ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಆಚರಣೆ 

ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಆಚರಣೆ

ಬೆಟಗೇರಿ ಸೆ 16 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದಲ್ಲಿ ಇದೇ ಸೋಮವಾರ ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಆಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಮುಂಜಾನೆ 10 ಗಂಟೆಗೆ ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಪ್ಪಾರ್ಪನೆ ಕಾರ್ಯಕ್ರಮ ಜರುಗಿದ ಬಳಿಕ ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮಕ್ಕಳಿಗೆ ಸಿಹಿ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಗ್ರಾಪಂ ಅಧ್ಯಕ್ಷ, ಸದಸ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ವಿಶ್ವಕರ್ಮ ಸಮುದಾಯದ ಹಿರಿಯರು, ಮುಖಂಡರು, ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಇಲ್ಲಿಯ ವಿಶ್ವಕರ್ಮ ಜಯಂತ್ಯುತ್ಸವ ಆಚರಣೆ ಸಮಿತಿ ಪತ್ರಿಕಾ ಪ್ರಕಟನೆಗೆ ತಿಳಿಸಿದೆ.

Related posts: