RNI NO. KARKAN/2006/27779|Monday, June 16, 2025
You are here: Home » breaking news » ಬೆಳಗಾವಿ:ಚನ್ನಮ್ಮ ವಿವಿ ಘಟನೆ : ಮಾರುತಿ ಅಷ್ಟಗಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ:ಚನ್ನಮ್ಮ ವಿವಿ ಘಟನೆ : ಮಾರುತಿ ಅಷ್ಟಗಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ 

ಚನ್ನಮ್ಮ ವಿವಿ ಘಟನೆ : ಮಾರುತಿ ಅಷ್ಟಗಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಬೆಳಗಾವಿ ಅ 4 : ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಕುಲಪತಿ ಹೊಸಮನಿ ಮತ್ತು ಅಲ್ಲಿಯ ವಿದ್ಯಾರ್ಥಿಗಳು ಮೇಲೆ ಹಲ್ಲೆ ಖಂಡಿಸಿ ಬಿಜೆಪಿ ಮುಖಂಡರು ಮಾರುತಿ ಅಷ್ಟಗಿ ನೇತೃತ್ವದಲ್ಲಿ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು,  ಪ್ರತಿಯೊಂದು ವಿಷಯಗಳಲ್ಲಿ ರಾಜಕೀಯ ಪ್ರಭಾವ ಜಾಸ್ತಿಯಾಗಿದೆ. ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿಗರು ಕಳೆದ ಸೋಮವಾರ ಹಲ್ಲೆ ಮಾಡಿ ವಿವಿಯ ಕೊಠಡಿಯ ಗಾಜು ಪುಡಿ ಮಾಡಿ, ಕುಲಪತಿ ಮೇಲೆ ಹಲ್ಲೆ ಮಾಡಿದರು ಜಿಲ್ಲೆಯ ಅಧಿಕಾರಿಗಳು ಯಾವುದೇ ಕ್ರಮ ತಗೆದುಕೊಳ್ಳದಿರುವುದನ್ನು ನೋಡಿದರೆ ಪೊಲೀಸ್ ಇಲಾಖೆ ರಾಜಕಾರಣಿಗಳ ಅಣತಿಯಂತೆ ಕಾರ್ಯನಿರ್ವಹಿಸುತ್ತಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.  
ನಗರದ ಸಾಹಿತ್ಯ ಭವನದಿಂದ ನಡೆದ ಪ್ರತಿಭಟನಾಕಾರರು ಚನ್ನಮ್ಮ ವೃತ್ತದ ಸುತ್ತಲೂ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ಪ್ರತಿಭಟಸಿದರು. ಪೊಲೀಸರು ಸ್ವಂತ ಕೇಸ್ ದಾಖಲಿಸದೆ ಈ ಪ್ರಕರಣದಲ್ಲಿ ವಿಳಂಬ ಮಾಡುತ್ತಿರುವುದು ಅನುಮಾನಕ್ಕೆ ಎಡೆಮಾಡಿದೆ. ಹೀಗೆ ನಿರ್ಲಕ್ಷ್ಯ ಮುಂದುವರೆದರೆ ಡಿ.ಸಿ  ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

Related posts: