RNI NO. KARKAN/2006/27779|Wednesday, January 14, 2026
You are here: Home » breaking news » ಗೋಕಾಕ:ಕೇಂದ್ರ ಸಚಿವ ಅನಂತಕುಮಾರ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ

ಗೋಕಾಕ:ಕೇಂದ್ರ ಸಚಿವ ಅನಂತಕುಮಾರ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ 

ಕೇಂದ್ರ ಸಚಿವ ಅನಂತಕುಮಾರ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ
ಗೋಕಾಕ ನ 12 : ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಅನಂತಕುಮಾರ(59) ಅವರ ನಿಧನಕ್ಕೆ ಅರಭಾವಿ ಶಾಸಕ ಹಾಗೂ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಅನಂತಕುಮಾರ ಅವರು ಸುಸಂಸ್ಕøತ ಹಾಗೂ ಸಜ್ಜನ ರಾಜಕಾರಣಿಯಾಗಿದ್ದರು. ಎಲ್ಲ ಪಕ್ಷಗಳ ಮುಖಂಡರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಇವರು ಸ್ನೇಹಕ್ಕೆ ಹೆಚ್ಚಿನ ಗೌರವ ನೀಡುತ್ತಿದ್ದರು. ಉತ್ತಮ ಸಂಸದೀಯ ಪಟುವಾಗಿದ್ದ ಇವರು 1996 ರಿಂದ ಲೋಕಸಭಾ ಸದಸ್ಯರಾಗಿ, ಕೇಂದ್ರ ಸರ್ಕಾರದ ಮಹತ್ವದ ಖಾತೆಗಳ ಸಚಿವರಾಗಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ಹಾಗೂ ದೇಶಕ್ಕೆ ಅಪಾರ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಇವರ ಅಕಾಲಿಕ ನಿಧನ ನನಗೆ ತುಂಬಲಾರದ ಹಾನಿಯಾಗಿದೆ. ಇವರ ನಿಧನದಿಂದ ಕುಟುಂಬದಲ್ಲಾದ ದುಃಖವನ್ನು ಸಹಿಸುವ ಶಕ್ತಿಯನ್ನು ಆ ದೇವರು ನೀಡಲಿ. ಅನಂತಕುಮಾರ ಅವರ ಆತ್ಮಕ್ಕೆ ಚಿರಶಾಂತಿ ಪ್ರಾಪ್ತಿಯಾಗಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts: