RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಗ್ರಾಮ ಪಂಚಾಯ್ತಿ ಪಿಡಿಒ ಬಸಪ್ಪ ಸಿದ್ದಯ್ಯ ವಡೇರಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ

ಗೋಕಾಕ:ಗ್ರಾಮ ಪಂಚಾಯ್ತಿ ಪಿಡಿಒ ಬಸಪ್ಪ ಸಿದ್ದಯ್ಯ ವಡೇರಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ 

ಗ್ರಾಮ ಪಂಚಾಯ್ತಿ ಪಿಡಿಒ ಬಸಪ್ಪ ಸಿದ್ದಯ್ಯ ವಡೇರಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ
ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಫೆ 18 :

 

ಧಾರವಾಡದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಇವರ ಸಹಕಾರದೊಂದಿಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಬೆಂಗಳೂರು ಸುರ್ವೆ ಕಲ್ಚರಲ್ ಅಕಾಡೆಮಿ ಇವರ ಸಹಯೋಗದಲ್ಲಿ ರವಿವಾರ ಫೆ.17 ರಂದು ನಡೆದ ಡಾ.ವಿ.ಕೃ.ಗೋಕಾಕ ರಾಷ್ಟ್ರೀಯ ಕಲಾ ಪ್ರತಿಭೋತ್ಸವ ಹಾಗೂ ಭಾರತ ವಿಕಾಸರತ್ನ ರಾಷ್ಟ್ರ ಪ್ರಶಸ್ತಿ, ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದ ಗ್ರಾಮ ಪಂಚಾಯ್ತಿ ಪಿಡಿಒ ಬಸಪ್ಪ ಸಿದ್ದಯ್ಯ ವಡೇರ ಅವರಿಗೆ ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಚೆನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವೀರಕ್ತಮಠದ ಗುರುಬಸವ ಸ್ವಾಮಿಜಿ ಅವರ ಸಾನಿಧ್ಯ, ಸುರ್ವೆ ಸ್ಥಾಪಕ ಅಧ್ಯಕ್ಷ ರಮೇಶ ಸುರ್ವೆ ಅಧ್ಯಕ್ಷತೆ ವಹಿಸಿದ್ದರು. ಚಲನಚಿತ್ರ ನಟಿ ಮೀನಾ, ಚಲನಚಿತ್ರ ಕಲಾವಿದ ಶಂಕರ ಭಟ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಕೇಂದ್ರ ಕಸಾಪ ಪ್ರತಿನಿಧಿ, ಸಮ್ಮೇಳನಾಧ್ಯಕ್ಷ ಡಾ.ಶೇಖರಗೌಡ ಮಾಲಿಪಾಟೀಲ, ಸ್ವಾಗತ ಸಮಿತಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಸುರ್ವೆ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ದೇವೇಂದ್ರಕುಮಾರ ನಿಗಡೆ, ಪ್ರಧಾನ ಕಾರ್ಯದರ್ಶಿ ಕಿಶನ್ ಸುರ್ವೆ ಆರ್., ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ ಗೊಂಡಬಾಳ, ಉತ್ತರ ಕರ್ನಾಟಕ ಸಂಚಾಲಕ ಬಿ.ಎಚ್.ಹೊಂಗಲ್ ಸೇರಿದಂತೆ ವಿವಿಧ ವಲಯದ ಭಾರತ ವಿಕಾಸರತ್ನ ರಾಷ್ಟ್ರ ಪ್ರಶಸ್ತಿ, ಕರ್ನಾಟಕ ವಿಕಾಸರತ್ನ ರಾಜ್ಯ ಪ್ರಶಸ್ತಿ ಪುರಸ್ಕøತರು, ಮತ್ತೀತರರು ಇದ್ದರು.

Related posts: