RNI NO. KARKAN/2006/27779|Wednesday, May 20, 2026
You are here: Home » ಮುಖಪುಟ » ಬೆಂಕಿಗೆ ಆಹುತಿಯಾದ ಹಂಚಿನಾಳ ಗ್ರಾಮಕ್ಕೆ ಸಚಿವ ಜಾರಕಿಹೊಳಿ ಭೇಟಿ

ಬೆಂಕಿಗೆ ಆಹುತಿಯಾದ ಹಂಚಿನಾಳ ಗ್ರಾಮಕ್ಕೆ ಸಚಿವ ಜಾರಕಿಹೊಳಿ ಭೇಟಿ 

ಬೆಂಕಿಗೆ ಆಹುತಿಯಾದ ಹಂಚಿನಾಳ ಗ್ರಾಮಕ್ಕೆ ಸಚಿವ ಜಾರಕಿಹೊಳಿ ಭೇಟಿ

ಸವದತ್ತಿ ::  ಆಕಸ್ಮಿಕ ಬೆಂಕಿ ಅವಘಡಕ್ಕೆ ನಿನ್ನೆ ಸುಮಾರು 50 ಕ್ಕೂ ಹೆಚ್ಚು ಮನೆಗಳು ಸುಟ್ಟು ಕರಕಲಾದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ನಡೆದ್ದಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಬೆನ್ನಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೆಂಕಿ ಅವಘಡಕ್ಕೆ ತುತ್ತಾದ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಈ ಸಂಧರ್ಭದಲ್ಲಿ ಮಾತನಾಡಿದ ಸಚಿವರು ಬಸವ ವಸತಿ ಯೋಜನೆ ಅಡಿ 100 ಮನೆ ಮಂಜೂರು ಮಾಡಲಾಗಿದ್ದು, ಇದರಲ್ಲಿ 72 ಮನೆಗಳನ್ನು ಮನೆ ಕಳೆದುಕೊಂಡವರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯ ಸೂರು ಕಳೆದುಕೊಂಡವರಿಗೆ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು, ನಿರಾಶ್ರಿತರಿಗೆ ಗಂಜಿ ಕೇಂದ್ರ ತೆಗೆಯಲು ನಿರ್ಧಾರ ಮಾಡಿರುವುದಾಗಿ ಹೇಳಿದರು.

ಸಚಿವ ಜಾರಕಿಹೊಳಿ ಜೊತೆ ಶಾಸಕ ಆನಂದ ಮಾಮನಿ, ಸವದತ್ತಿ ತಹಶೀಲ್ದಾರ್‌‌ , ಸ್ಥಳೀಯ ಮುಖಂಡರು ಸೇರಿದಂತೆ ಅಧಿಕಾರಿಗಳು ಇದ್ದರು

Related posts: