RNI NO. KARKAN/2006/27779|Thursday, August 7, 2025
You are here: Home » breaking news » ನಿಪ್ಪಾಣಿ:ಪ್ರಚಾರ ಬಾರದಿದ್ದಕ್ಕೆ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಪ್ರಕಾಶ್ ಹುಕ್ಕೇರಿ ಗರಂ

ನಿಪ್ಪಾಣಿ:ಪ್ರಚಾರ ಬಾರದಿದ್ದಕ್ಕೆ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಪ್ರಕಾಶ್ ಹುಕ್ಕೇರಿ ಗರಂ 

ಪ್ರಚಾರ ಬಾರದಿದ್ದಕ್ಕೆ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಪ್ರಕಾಶ್ ಹುಕ್ಕೇರಿ ಗರಂ

ನಮ್ಮ ಬೆಳಗಾವಿ ಸುದ್ದಿ , ನಿಪ್ಪಾಣಿ ಮಾ 29 :

ನಾಮಪತ್ರ ಸಲ್ಲಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ. ಆದ್ರೆ ಸಿದ್ದರಾಮಯ್ಯ ಮೈಸೂರಿಗೆ, ಕುಮಾರಸ್ವಾಮಿ ಮಂಡ್ಯ ಹಾಗೂ ಹಾಸನಕ್ಕೆ ಮಾತ್ರ ಮೀಸಲಾಗಿದ್ದಾರೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಂಸದ, ಪ್ರಕಾಶ್ ಹುಕ್ಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಕ್ಷೇತ್ರಾದ್ಯಂತ ಭರ್ಜರಿ ಪ್ರಚಾರ ಕೈಗೊಂಡು ಬಳಿಕ ಮಾತನಾಡಿದ ಅವರು. ಚಿಕ್ಕೋಡಿ ಮತ್ತು ಬೆಳಗಾವಿಗೂ ಕೂಡ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಬರಬೇಕು. ತಮ್ಮ ನಾಮಪತ್ರ ಸಲ್ಲಿಕೆಗೆ ಬರುವಂತೆ ಆಹ್ವಾನಿಸಲಾಗಿದೆ. ಆದ್ರೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಆ ಭಾಗದತ್ತ ಮಾತ್ರ ಮೀಸಲಾಗಿದ್ದಾರೆ. ನಮ್ಮ ಕಡೆಗೂ ಕೂಡ ಅವರು ಬರಬೇಕು. ಯಾವಾಗ ಅವರು ಡೇಟ್ ಕೊಡ್ತಾರೋ ಅಂದೆ ನನ್ನ ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಿದ್ದಾಗಿ ಪ್ರಕಾಶ್ ಹುಕ್ಕೇರಿ ಹೇಳಿದ್ರು.

Related posts: