ಗೋಕಾಕ:ಕೌಜಲಗಿಗೆ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ
ಕೌಜಲಗಿಗೆ ಸರಕಾರಿ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ
ನಮ್ಮ ಬೆಳಗಾವಿ ಸುದ್ದಿ , ಕೌಜಲಗಿ ಮೇ 21 :
ಪಟ್ಟಣದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20 ನೇ ಶೈಕ್ಷಣಿಕ ಸಾಲಿನಿಂದ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಆರಂಭವಾಗಿದೆ ಎಂದು ಮೂಡಲಗಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಸುದ್ದಿಗಾರರಿಗೆ ತಿಳಿಸಿದರು.
ಶೈಕ್ಷಣಿಕವಾಗಿ ಬೆಳೆಯುತ್ತಿರುವ ಕೌಜಲಗಿ ಪಟ್ಟಣದಲ್ಲೂ ಆಂಗ್ಲ ಮಾಧ್ಯಮದ ಶಿಕ್ಷಣ ಅವಶ್ಯವಾಗಿತ್ತು. ಈ ನಿಟ್ಟಿನಲ್ಲಿ ಸರಕಾರ ಹಲವಾರು ಮಾನದಂಡಗಳಿಂದ ತೂಗಿ ಕೌಜಲಗಿಗೆ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲಾಗಿದೆ. ಮೂಡಲಗಿ ವಲಯದಲ್ಲಿ ಒಟ್ಟು 5 ಆಂಗ್ಲ ಮಾಧ್ಯಮ ಶಾಲೆಗಳು ಮಂಜೂರಾಗಿವೆ, ಅದರಲ್ಲಿ ಕೌಜಲಗಿಯೂ ಒಂದು. ಆಂಗ್ಲ ಮಾಧ್ಯಮ ಶಾಲೆ ಪಟ್ಟಣಕ್ಕೆ ಮಂಜೂರು ಆಗಿರುವುದರಿಂದ ನಾಗರಿಕರು ತುಂಬಾ ಖುಷಿ ಪಡುತ್ತಿದ್ದು, ಶಾಸಕರಿಗೆ ಹಾಗೂ ಶಿಕ್ಷಣಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.