ಗೋಕಾಕ:2013ರ ಭೂಸ್ವಾಧೀನ ಕಾಯ್ದೆ ರೈತರ ಪಾಲಿಗೆ ಮರಣ ಶಾಸನವಾಗಿದೆ : ಭೀಮಶಿ ಗದಾಡಿ ಆರೋಪ
2013ರ ಭೂಸ್ವಾಧೀನ ಕಾಯ್ದೆ ರೈತರ ಪಾಲಿಗೆ ಮರಣ ಶಾಸನವಾಗಿದೆ : ಭೀಮಶಿ ಗದಾಡಿ ಆರೋಪ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 9 :
2013ರ ಭೂಸ್ವಾಧೀನ ಕಾಯ್ದೆಯನ್ನು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ತಿದ್ದುಪಡಿ ಮಾಡಿದ್ದು ಇದು ರೈತರ ಪಾಲಿಗೆ ಮರಣ ಶಾಸನವಾಗಿದ್ದು ತಕ್ಷಣ ಇದನ್ನು ರದ್ದು ಪಡಿಸಬೇಕೆಂದು ರಾಜ್ಯ ರೈತ ಸಂಘ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು 2013ರ ಭೂಸ್ವಾಧೀನ ಕಾಯ್ದೆಯು ರಸ್ತೆ, ಹೆದ್ದಾರಿ, ನೀರಾವರಿ ಯೋಜನೆ, ವಿಮಾನ ನಿಲ್ದಾಣಗಳು, ರೈಲು ಮಾರ್ಗಗಳು ಸೇರಿದಂತೆ ಪೂರ್ಣವಾಗಿ ಸಾರ್ವಜನಿಕ ಉದ್ದೇಶಗಳಿಗೆ ಮಾತ್ರ ಸೀಮಿತಗೊಳಿಸಿದ್ದು ಇದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಹಿತಾಸಕ್ತಿಯನ್ನು ಪರಿಗಣಿಸದೇ ಈಗ 2019ರ ತಿದ್ದಪಡಿ ಕಾಯ್ದೆಯಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಿ ಒಂದು ಹಿಡಿಗಂಟು ರೂಪದಲ್ಲಿ ಪರಿಹಾರ ನೀಡುವ ತಿದ್ದುಪಡಿಯನ್ನು ಜಾರಿಗೆ ಮಾಡುತ್ತಿರುವುದು ಸಂಪೂರ್ಣವಾಗಿ ರೈತರನ್ನು ಹತ್ತಿಕ್ಕುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರ ಸಾಲ ಮನ್ನಾ ಯೋಜನೆಯನ್ನು ಕೈಗೊಂಡು ರೈತರಿಗೆ ನೆರವಾಗುತ್ತಿದ್ದೇನೆ ಎಂದು ಹೇಳುತ್ತಾ ಇನ್ನೊಂದೆಡೆ ಈ ಮರಣ ಶಾಸನವನ್ನು ಜಾರಿಗೆಗೊಳಿಸಿ ರೈತರ ಜೀವನದೊಂದಿಗೆ ಕೂಡಾ ಚೆಲ್ಲಾಟವಾಡುತ್ತಿದ್ದಾರೆ. ಈ ಭೂಸ್ವಾಧೀನ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ನಾಳೆ ದಿ. 10 ರಂದು ರಾಜ್ಯದಾತಂತ್ಯ ಹೆದ್ದಾರಿಗಳನ್ನು ತಡೆಯನ್ನು ಮಾಡಿ ಹೋರಾಟ ನಡೆಸುತ್ತಿದ್ದು ಅದರಂತೆ ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆ ನಡೆಸಿ ಹೋರಾಟ ನಡೆಸಲಾಗುವುದು ಕಾರಣ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟನೆಯಲ್ಲಿ ಭೀಮಶಿ ಗದಾಡಿ ಅವರು ಮನವಿ ಮಾಡಿದ್ದಾರೆ.