ಘಟಪ್ರಭಾ:1999/2000 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ
1999/2000 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ
ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜೂ 9 :
ಘಟಪ್ರಭಾ ಪಿ.ಜಿ ಮಲ್ಲಾಪೂರದ ಕನ್ನಡ ಮಾಧ್ಯಮ ಆದರ್ಶ ಪ್ರಾಥಮಿಕ ಶಾಲೆಯ 1999-2000 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವು ಶನಿವಾರದಂದು ದೂಪದಾಳ ಗ್ರಾಮದ ನಿರೀಕ್ಷಣಾ ಮಂದಿರದಲ್ಲಿ ಜರುಗಿತು
ಕಾರ್ಯಕ್ರಮಕ್ಕೆ ಆಗಮಿಸಿದ ನಿವೃತ್ತ ಶಿಕ್ಷಕರೆಲ್ಲರೂ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯೆ ನೀಡಿದ ಸಂಸ್ಥೆ ಹಾಗೂ ಶಿಕ್ಷಕರನ್ನು ಮರೆಯದೆ, ತಮ್ಮ ಜೀವನದಲ್ಲಿ ಪ್ರಗತಿಯನ್ನು ಸಾಧಿಸಿರುವ ತಮ್ಮ ಹಳೆಯ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಲ್ಲ ಹಳೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಹಳೆಯ ನೆನಪುಗಳನ್ನು ಮೆಲುಕಿಹಾಕಿ ಆನಂದಿಸಿದರು